Breaking News

ರಾಜ್ಯದ 30 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ..!

Share News

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಮಂಡ್ಯ, ರಾಮನಗರ, ಬಳ್ಳಾರಿ ಸೇರಿದಂತೆ ರಾಜ್ಯದ ಸುಮಾರು 30 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ.

ಬೆಂಗಳೂರು ನಗರದಲ್ಲಿ 10 ಕಡೆ, ಬಳ್ಳಾರಿಯಲ್ಲಿ 7 ಕಡೆ ಸೇರಿದಂತೆ ರಾಜ್ಯಾದ್ಯಂತ ಏಕಕಾಲಕ್ಕೆ 30 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳು (BBMP Officials) ಸೇರಿದಂತೆ ಇತರ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವು

ಬೆಸ್ಕಾಂ (BESCOM) ಕಚೇರಿಯಲ್ಲಿ ಚೀಫ್ ಜನರಲ್ ಮ್ಯಾನೇಜರ್ ಆಗಿದ್ದ ಎಂ.ಎಲ್‌ ನಾಗರಾಜ್ ಮನೆ, ಕಚೇರಿಗಳ ಮೇಲೂ ದಾಳಿ ನಡೆದಿದೆ. ಕೆಲ ದಿನಗಳ ಹಿಂದೆ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದ ನಾಗರಾಜ್‌ ಕಳೆದ ಒಂದೂವರೆ ತಿಂಗಳಿನಿಂದ ಅಮಾನತಿನಲ್ಲಿದ್ದರು. ಈಗ ಆತನ ಮನೆಯ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಹಲವು ಆಸ್ತಿಗಳನ್ನ ಬಯಲಿಗೆಳೆದಿದ್ದಾರೆ. ನಾಗರಾಜ್ ಈ ಹಿಂದೆ ವಾಣಿಜ್ಯ ಲೈಸೆನ್ಸ್ ಕೊಡುವ ವಿಚಾರಕ್ಕೆ 7.50 ಲಕ್ಷ ರೂ. ಲಂಚ ಕೇಳಿದ್ದರು. ನಾಗರಾಜ್ ಪರವಾಗಿ ಡ್ರೈವರ್ ಮುರಳಿಕೃಷ್ಣ 7 ಲಕ್ಷ ರೂ. ಪಡೆದಿದ್ದ, ಹಣ ಪಡೆಯುವಾಗಲೇ ಸಿಕ್ಕಿಬಿದ್ದಿದ್ದರಿಂದ ನಾಗರಾಜ್ ಅವರನ್ನ ಒಂದೂವರೆ ತಿಂಗಳಿನಿಂದ ಅಮಾನತ್ತಿನಲ್ಲಿಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬೈಕಿಗೆ 210 ರೂಪಾಯಿ ಪೆಟ್ರೋಲ್ ಹಾಕಲು ಹೇಳಿ ಬರೇ 10 ರೂ. ಗೂಗಲ್ ಪೇ ಮಾಡಿ ಸವಾರ ಪರಾರಿ

ಇದೀಗ ನಾಗರಾಜ್‌ಗೆ ಸೇರಿದ ಬಳ್ಳಾರಿಯ 7 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಈ ವೇಳೆ ನಾಗರಾಜ್ ಹೆಸರಲ್ಲಿ 9 ಸೈಟ್‌ಗಳು, 3 ಮನೆಗಳು, 3 ಪೆಟ್ರೋಲ್ ಬಂಕ್, ಕೃಷಿ ಜಮೀನು, ಶಿಕ್ಷಣ ಸಂಸ್ಥೆಗಳು ಪತ್ತೆಯಾಗಿದೆ. ದಾಳಿ ವೇಳೆ ಹಲವಾರು ದಾಖಲೆಗಳನ್ನ ಪತ್ತೆಹಚ್ಚಿರುವ ಲೋಕಾಯುಕ್ತ ಅಧಿಕಾರಿಗಳು ಶೋಧಕಾರ್ಯ ಮುಂದುವರಿಸಿದ್ದಾರೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *