Breaking News

ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ!

Share News

ಕರ್ನಾಟಕದ ಹಲವೆಡೆ ಇಂದು(ಸೋಮವಾರ) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ(Lokayukta raids). ರಾಜ್ಯದ 17 ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳಿ ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಚಿತ್ರದುರ್ಗ, ಹಾಸನ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಹಾಸನದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ

ಹಾಸನದಲ್ಲಿ KPTCL ಜೂನಿಯರ್ ಇಂಜಿನಿಯರ್ H.E.ನಾರಾಯಣ ಎನ್ನುವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿಯಾಗಿದ್ದು, ದಾಖಲೆ ಪರಿಶೀನಲೆ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ದಾಳಿ

ಚಿತ್ರದುರ್ಗದಲ್ಲಿ(Chitradurga) ಇಂದು(ಅ.30) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರ ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.


Share News

Leave a Reply

Your email address will not be published. Required fields are marked *