Breaking News

ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Share News

ಹಾಸನ/ಚಿಕ್ಕಮಗಳೂರು/ಮಂಡ್ಯ: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta) ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದಡಿ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಬುಧವಾರ ದಾಳಿ ನಡೆಸಿದೆ.

ಇದನ್ನೂ ಓದಿ: ಬಂಟ್ವಾಳ: ಸಜೀಪ ಸಮೀಪ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ

ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಹೆಲ್ತ್ ಇನ್‌ಸ್ಪೆಕ್ಟರ್‌ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ಪರಿಶೀಲನೆ ನಡೆಸಲಾಗುತ್ತಿದೆ.

ಚಿಕ್ಕಮಗಳೂರಿನಲ್ಲಿ ಕಡೂರು ಪಟ್ಟಣದಲ್ಲಿರುವ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ‌ ನಡೆಸಿದೆ. ನೇತ್ರಾವತಿ ಅವರು ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿದ್ದಾರೆ. 13 ವರ್ಷದಿಂದ ಅಧಿಕ ಆಸ್ತಿ ಹೊಂದಿರುವ ಆರೋಪ ಹೊತ್ತಿದ್ದಾರೆ. ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಇದನ್ನೂ ಓದಿ: ಪುತ್ತೂರು: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ; ಶಿಕ್ಷಕಿ ಸಾವು

ಇತ್ತ ಮಂಡ್ಯದಲ್ಲಿ PWD ಇಲಾಖೆ EE ಹರ್ಷ ಎಂಬವರ ಮನೆ, ಕಚೇರಿ, ಕುಟುಂಬಸ್ಥರು, ಸಂಬಂಧಿಕರ ಮನೆ ಮೇಲೂ ಲೋಕ ದಾಳಿ ಮಾಡಿದೆ. ಇವರ ಮನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿದೆ. ಮಂಡ್ಯದ ಕಚೇರಿ, ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ. ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ಆರು ಕಡೆ ದಾಳಿ ಮಾಡಿದ್ದಾರೆ.


Share News

Leave a Reply

Your email address will not be published. Required fields are marked *