Breaking News

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಲ್ಲಿ ಜ.9 ರ ವರೆಗೆ ಮಳೆ ಮುನ್ಸೂಚನೆ…!

Share News

ಮಂಗಳೂರು, ಜ 03: ಕರಾವಳಿಯ ಹಲವೆಡೆ ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳೂರು ನಗರ ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ: ಸ್ಕೂಟಿ ಸಮೇತ ಮಲ್ಪೆ ಸಮುದ್ರಕ್ಕೆ ಬಿದ್ದ ಮೀನುಗಾರ ಮೃತ್ಯು..!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಶಾಕ್ ; ಮದ್ಯದ ದರ ಏರಿಕೆ.!

ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದ್ದು ದಕ್ಷಿಣ ಕನ್ನಡ, ಉಡುಪಿ ಸೇರಿ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಕೆಲವೆಡೆ ಮಳೆಯಾಗುತ್ತಿದೆ. ಅಲ್ಲದೆ, ಅರಬ್ಬಿ ಸಮುದ್ರದಲ್ಲಿ ಗಂಟೆ ಕರಾವಳಿಯಲ್ಲಿ 40-55ಕಿಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *