Breaking News

ಮಂಗಳೂರು: ಸಿಸಿಬಿ ಪೊಲೀಸರ ದಾಳಿ ;ಮೂವರು ಗಾಂಜಾ ಪೆಡ್ಲರ್ಸ್ ಗಳ ಬಂಧನ!

Share News

ಮಂಗಳೂರು : ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್ ಬಳಿಯಲ್ಲಿ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ತಂಡದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮಂಗಳೂರು ಲೋಕಸಭೆಯಲ್ಲಿ ನಳಿನ್ ಮುಂದೆ ಪ್ರಬಲ ಸ್ಪರ್ಧೆ ನೀಡುವ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊರಹೊಮ್ಮಿದ ಹರೀಶ್ ಕುಮಾರ್!

3 ಮಂದಿ ವ್ಯಕ್ತಿಗಳು ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಸಿಸಿಬಿ ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಸೇರಿ ಒಟ್ಟು 95 ಸಾವಿರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮಡಿಕೇರಿಯ ಪ್ರಮೋದ್ ಎಮ್.ಜಿ ಅಲಿಯಾಸ್ ಡಿಸ್ಕ್,(30 ವರ್ಷ), ಮೊಹಮ್ಮದ್ ರಾಶೀದ್ ಎಂ.ಝಡ್ @ ರಾಶೀ,(41 ವರ್ಷ),ದರ್ಶನ್ ಎಸ್, (24 ವರ್ಷ), ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳ ಪೈಕಿ ಪ್ರಮೋದ್ ಎಮ್ ಜಿ ಅಲಿಯಾಸ್ ಡಿಸ್ಕ್ ಎಂಬಾತನ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಕೊಲೆಯತ್ನ ಹಾಗೂ ಮಡಿಕೇರಿ ಜಿಲ್ಲೆಯ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿವೆ.
ಮೊಹಮ್ಮದ್ ರಾಶೀದ್ ಎಂ.ಝಡ್ ಅಲಿಯಾಸ್ ರಾಶೀ ಎಂಬಾತನ ವಿರುದ್ಧ ಮಡಿಕೇರಿ ಜಿಲ್ಲೆಯ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ಮಡಿಕೇರಿ ನಗರ ಠಾಣೆಯಲ್ಲಿ ಕೊಲೆ, ದರೋಡೆ, ಸುಲಿಗೆ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಪುತ್ತೂರು : ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ!

ಮತ್ತೊಬ್ಬ ಆರೋಪಿ ದರ್ಶನ್ ಎಸ್ ಎಂಬಾತನ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

WATCH VIDEO ON YOUTUBE:ಶುದ್ಧ ಗಾಣದ ಎಣ್ಣೆ ತೆಗೆಯುವ ಕಟಪಾಡಿಯ ಮಿಲ್!


Share News

Leave a Reply

Your email address will not be published. Required fields are marked *