Breaking News

ಮಂಗಳೂರು: ಖ್ಯಾತ ಸಾಹಿತಿ ಜಾನಪದ ತಜ್ಞ ಅಮೃತ ಸೋಮೇಶ್ವರ ಇನ್ನಿಲ್ಲ.!

Share News

ಮಂಗಳೂರು ಡಿಸೆಂಬರ್ 06: ಕನ್ನಡದ ಖ್ಯಾತ ಸಾಹಿತಿ ಯಕ್ಷಗಾನ ಪ್ರಸಂಗ ಕರ್ತೃ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ(89) ಇಂದು ಬೆಳಿಗ್ಗೆ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ ಕನ್ನಡ, ತುಳು ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ, ಸಮಾಜಮುಖಿ ಚಂತನೆಯುಳ್ಳ ಓರ್ವ ಸಹೃದಯಿಯಾಗಿ ಅವರು ಕರ್ನಾಟಕದ ಜನರಿಗೆ ಪರಿಚಿತರಾಗಿದ್ದರು.

ಇದನ್ನೂ ಓದಿ: ರಾಜ್ಯದ ಜನರಿಗೆ ಮತ್ತೊಮ್ಮೆ ವಿದ್ಯುತ್‌ ಬೆಲೆಯೇರಿಕೆಯ ಬಿಸಿ ತಾಗುವ ಸಾಧ್ಯತೆ

ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1953 ಸೆಪ್ಟಂಬರ್ 27 ರಂದು ಜನಿಸಿದ ಅವರು. ಪ್ರಾರಂಭಿಕ ಶಿಕ್ಷಣ ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್‌ನಲ್ಲಿ ಮುಗಿಸಿದ ಅವರು ಪ್ರೌಢ ಶಿಕ್ಷಣವನ್ನ ಆನಂದಾಶ್ರಮದಲ್ಲಿ ಮಾಡಿದ್ದಾರೆ. ಆನಂತರ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ಪದವಿ ಪಡೆದು, ಮದರಾಸು ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ನೇಣು ಬಿಗಿದು ಆತ್ಮಹತ್ಯೆ

ತಾವು ಓದಿದ ಅಲೋಷಿಯಸ್ ಕಾಲೇಜಿನಲ್ಲಿಯೇ ಅಧ್ಯಾಪಕರಾಗಿ ಕೆಲಸ ಆರಂಭಿಸಿದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ.ಪದವಿ ಪಡೆದ ನಂತರ ಪುತ್ತೂರಿನ ಸೇಂಟ್ ಫಿಲೋಮಿನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಂತರ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದ್ದಾರೆ.
ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆಗಳನ್ನು ನೀಡಿದ ಅಮೃತ ಸೋಮೇಶ್ವರ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ ಎಂದು ಹಲವು ಸಾಹಿತಿಗಳು, ಲೇಖಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಅಪಾರ ಬಂಧುಗಳನ್ನು ಅಗಲಿದ್ದಾರೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *