Breaking News

ಮಂಗಳೂರು: ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚಿದ ಕಿಡಿಗೇಡಿಗಳು..!

Share News

ಮಂಗಳೂರು, ಡಿ13: ಪುರಾತನ ದೇವಾಲಯಗಳಲ್ಲಿ ಒಂದಾಗಿರುವ ಕರಾವಳಿಯ ಪ್ರಸ್ಥಿದ್ದ ಬೋಳಾರದ ಮಹತೋಭಾರ ಶ್ರೀ ಮಂಗಳಾದೇವಿ ದೇವಾಲಯದ ಹೆಸರನ್ನು, ಗೂಗಲ್ ಮ್ಯಾಪ್ ನಲ್ಲಿ ಯಾರೋ ತಿರುಚಿರುವ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕಾಂತಾರ-1 ಚಿತ್ರದಲ್ಲಿ ನಟಿಸಲು ಹೊಸ ಕಲಾವಿದರಿಗಿದೆ ಅವಕಾಶ !

ಧಾರ್ಮಿಕ ದತ್ತಿ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟಿರುವ ಮಂಗಳಾದೇವಿ ದೇವಸ್ಥಾನದ ಪ್ರಧಾನ ದೇವತೆಯಾದ “ಮಂಗಳಾಂಬೆ”ಯಿಂದಲೆ ಈ ಪ್ರದೇಶಕ್ಕೆ ಮಂಗಳೂರು ಎಂಬ ಹೆಸರು ಬಂದಿದೆ ಎಂಬ ಇತಿಹಾಸವಿದೆ. ಆದರೆ ದೇವಸ್ಥಾನದ ಹೆಸರನ್ನು “ಬೋಳಾರ್ ಶೇಕ್ ಉಮರ್ ಸಾಹೇಬ್ ಕಾಂಪೌಂಡು” ಎಂದು ತಿದ್ದಿರುವುದು ದೇವಾಲಯದ ಆಡಳಿತ ಮಂಡಳಿ ಯ ಗಮನಕ್ಕೆ ಬಂದಿದ್ದು ಈ ಕುರಿತು ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ.

ಇದನ್ನೂ ಓದಿ: ವಿಟ್ಲ :ಈಜಲು ಹೋಗಿದ್ದ ಯುವಕ ಜಾರಿ ಬಿದ್ದು ಮೃತ್ಯು!

ದೇವಾಲಯದ ಪವಿತ್ರತೆಗೆ ಧಕ್ಕೆ ತರುವ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ದೇವಸ್ಥಾನದ ಹೆಸರು ತಿರುಚಲಾಗಿದ್ದು, ತಪ್ಪಿತಸ್ಥರನ್ನು ಗುರುತಿಸಿ ಸೂಕ್ತ ಕ್ರಮ ಜರುಗಿಸಬೇಕು. ಗೂಗಲ್ ನಕ್ಷೆಯಲ್ಲಿ “ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ” ಎಂದು ಹೆಸರನ್ನು ಸರಿಪಡಿಸಬೇಕು ಎಂದು ದೇವಾಲಯದ ಆಡಳಿತ ಮಂಡಳಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದೆ.

WATCH VIDEO ON YOUTUBE: ನಾಗನ ಆರಾಧನೆಯೊಂದಿಗೆ ಪ್ರಕೃತಿಯನ್ನು ಸಂರಕ್ಷಿಸುವ ಮುಖ್ಯ ಉದ್ದೇಶ ನಾಗಬನಗಳದ್ದು: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *