Breaking News

ಮೇರಿಕೋಮ್‌ ಬಾಕ್ಸಿಂಗ್‌ಗೆ ನಿವೃತ್ತಿ ಘೋಷಣೆ

Share News

ನವದೆಹಲಿ: ಆರು ಬಾರಿ ವಿಶ್ವ ಚಾಂಪಿಯನ್ ಹಾಗೂ 2012 ರ ಒಲಿಂಪಿಕ್ ಪದಕ ವಿಜೇತೆಯಾಗಿರುವ ಮಾಂಗ್ಟೆ ಚುಂಗ್ನೈಜಾಂಗ್ ಮೇರಿ ಕೋಮ್ (Mary Kom) ಬಾಕ್ಸಿಂಗ್‌ಗೆ (Boxing) ನಿವೃತ್ತಿ ಘೋಷಿಸಿದ್ದಾರೆ.

ಇಂಟರ್‌ ನ್ಯಾಷನಲ್‌ ಬಾಕ್ಸಿಂಗ್‌ ಅಸೋಸಿಯೇಷನ್ ​​(IBA) ನಿಯಮದ ಪ್ರಕಾರ, 40 ವರ್ಷ ವಯಸ್ಸಿನವರೆಗೆ ಮಾತ್ರ ಪುರುಷ ಮತ್ತು ಮಹಿಳಾ ಬಾಕ್ಸರ್‌ಗಳಿಗೆ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ. ಆದರೆ ಇದೀಗ ಮೇರಿಯವರಿಗೆ 41 ವರ್ಷ ವಯಸ್ಸಾಗಿದ್ದರಿಂದ ಬುಧವಾರ ನಿವೃತ್ತಿ (Retirement) ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಬಾಕ್ಸಿಂಗ್‌ ನಲ್ಲಿ ಹೋರಾಡುವ ಹಸಿವು ನನಗೆ ಇನ್ನೂ ಇದೆ. ದುರದೃಷ್ಟವಶಾತ್ ವಯಸ್ಸಿನ ಮಿತಿ ಮುಗಿದಿರುವುದರಿಂದ ನಾನು ಯಾವುದೇ ಸ್ಪರ್ಧೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ಹೀಗಾಗಿ ಇಂದು ನಾನು ಬಲವಂತವಾಗಿ ತೊರೆಯುತ್ತಿದ್ದೇನೆ ನಾನು ನಿವೃತ್ತಿ ಹೊಂದುತ್ತಿದ್ದೇನೆ. ನನ್ನ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ತುಂಬಾ ದುಃಖದಿಂದ ಇಂದು ನನ್ನ ಬಾಕ್ಸಿಂಗ್‌ ಗ್ಲೌಸ್‌ ಅನ್ನು ಬಿಚ್ಚಿಡುತ್ತಿದ್ದೇನೆ ಎಂದು ಹೇಳಿದರು.

ಬಾಕ್ಸಿಂಗ್ ಇತಿಹಾಸದಲ್ಲಿ ಆರು ವಿಶ್ವ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಜೊತೆಗೆ ಐದು ಬಾರಿ ಏಷ್ಯನ್ ಚಾಂಪಿಯನ್ ಆಗಿರುವ ಅವರು 2014 ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕವನ್ನು ಪಡೆದ ಭಾರತದ ಮೊದಲ ಮಹಿಳಾ ಬಾಕ್ಸರ್ ಎನಿಸಿಕೊಂಡಿದ್ದಾರೆ. AIBA ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯರಾದರು. ಅವರು 2005, 2006, 2008 ಮತ್ತು 2010 ಆವೃತ್ತಿಗಳಲ್ಲಿ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಗಳನ್ನು ಗೆದ್ದರು. 2008ರಲ್ಲಿ ಅವಳಿ ಮಕ್ಕಳು ಹಾಗೂ 2012 ರ ಒಲಿಂಪಿಕ್ ಪದಕವನ್ನು ಗೆದ್ದ ನಂತರ ಮೇರಿ ತನ್ನ ಮೂರನೇ ಮಗುವಿಗೆ ಜನ್ಮ ನೀಡಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತ; ತಲೆಗೆ ಪೆಟ್ಟು


Share News

Leave a Reply

Your email address will not be published. Required fields are marked *