Breaking News

ಮುಡಿಪು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ!

Share News

ಮಂಗಳೂರು : ಸಹೋದ್ಯೋಗಿ ಸ್ನೇಹಿತ ಸಾವನ್ನು ಅರಗಿಸಿಕೊಳ್ಳಲಾರದೆ ಯುವಕನೋರ್ವ ಖಿನ್ನತೆಯಿಂದ ನೇಣಿಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಮುಡಿಪುವಿನಲ್ಲಿ ನಡೆದಿದೆ.

ನಗರದ ಕಂಕನಾಡಿಯ ಬೈಕ್ ಶೋರೂಂನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಮುಡಿಪು ಕಾರಿನ ಗ್ಯಾರೇಜ್ ಒಳಗಡೆ ಕಬ್ಬಿಣದ ಸಲಾಕೆಗೆ ಕಿಶೋರ್ ನೇಣು ಹಾಕಿಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾನೆ.

ನ.20ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ ಮುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ಕಿಶೋರ್ ದಿನನಿತ್ಯವೂ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದೆ. ಗ್ಯಾರೇಜ್ ಒಳಗಡೆ ಕಿಶೋರ್ ನೇಣು ಹಾಕಿರುವುದು ಬೆಳಕಿಗೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಸುಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಪ್ತನ ಅಕಾಲಿಕ ಸಾವಿನಿಂದ ಕಿಶೋರ್ ಬಳ ನೊಂದಿದ್ದು ಖಿನ್ನತೆಗೊಳಗಾಗಿದ್ದರು. ಇದೇ ಆತನು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿದೆ ಎನ್ನಲಾಗಿದೆ, ಕೊಣಾಜೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

WATCH VIDEO ON YOUTUBE: ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಮಹಿಷಾ ಮರ್ದಿನಿ ನೃತ್ಯ ರೂಪಕ


Share News

Leave a Reply

Your email address will not be published. Required fields are marked *