Breaking News

ಹಿಜಾಬ್ ನಿಷೇಧ ವಾಪಾಸ್ ಸೂಚನೆ ;ಸಿಎಂ ಸಿದ್ದರಾಮಯ್ಯ

Share News

ಮೈಸೂರು ಡಿಸೆಂಬರ್ 22 : ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರುಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್ ಮತ್ತು ಕಾರು ಮುಖಾಮುಖಿ ಢಿಕ್ಕಿ ; ಯುವಕ ಮೃತ್ಯು..!

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಉಡುಪಿ :ಬನಿಯನ್‌ ಹಾಗೂ ಚಡ್ಡಿ ಧರಿಸಿ ಕಳ್ಳತನ….!

ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್‌ ಸರ್ಕಾರ ತೆರವು ಮಾಡುತ್ತಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹಿಜಾಬ್‌ ಧರಿಸಿ ತೆರಳಲು ಅವಕಾಶ ನೀಡಲು ಮುಂದಾಗಿದೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *