Breaking News

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ; ಮೂವರು ಆರೋಪಿಗಳ ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ಬಹುಮಾನ ಘೋಷಿಸಿದ ಎನ್ಐಎ

Share News

ಮಂಗಳೂರು ಅಕ್ಟೋಬರ್ 27 : ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ.

ಇದನ್ನೂ ಓದಿ: ಬಂಟ್ವಾಳ : ಮೆಲ್ಕಾರ್ ನಲ್ಲಿ ಮೂವರ ಮೇಲೆ ಚೂರಿ ಇರಿತ ; ವೈಯುಕ್ತಿಕ ವಿಚಾರ ವಿಕೋಪಕ್ಕೇರಿ ಗಲಾಟೆ!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್ ಕುಮಾರ್ ಸಾವನಪ್ಪಿದ್ದರು.

ಇದನ್ನೂ ಓದಿ: ಇಂದು ಈ ವರ್ಷದ ಕೊನೆಯ ಚಂದ್ರಗ್ರಹಣ!

ಈ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಎನ್ಐಎಗೆ ವಹಿಸಿತ್ತು. ಈಗಾಗಲೇ ಹಲವರನ್ನು ಎನ್ಐಎ ಬಂಧಿಸಿ ವಿಚಾರಣೆ ನಡೆಸುತ್ತಿದ್ದೆ. ಇನ್ನು ಕೆಲವು ಆರೋಪಿಗಳ ಬಂಧನವಾಗದ ಹಿನ್ನಲೆ ಈ ಸಂಬಂಧ ಎನ್‌ಐಎ ರಿವಾರ್ಡ್‌ ವಾಂಟೆಡ್‌ ನೋಟಿಸ್‌ ಅನ್ನು ಬಿಡುಗಡೆ ಮಾಡಿದೆ. ಆರೋಪಿ ನಂ.23 ನೌಷಾದ್‌ನ ಸುಳಿವಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಲೂಕಿನ ಪಡಂಗಡಿ ಗ್ರಾಮದ ನೌಷಾದ್. ಈತ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಅಲ್ಲದೆ ಪಿಎಫ್ಐ ನ ಸದಸ್ಯರಾದ ಮತ್ತಿಬ್ಬರು ಆರೋಪಿಗಳು ಅಬ್ದುಲ್ ನಾಸೀರ್ ಮತ್ತು ಅಬ್ದುಲ್ ರೆಹಮಾನ್ ಅವರ ಮಾಹಿತಿಗೂ 2 ಲಕ್ಷ ಬಹುಮಾನ ಘೋಷಿಸಿದೆ.


Share News

Leave a Reply

Your email address will not be published. Required fields are marked *