Breaking News

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಮತ್ತು ತಮಿಳುನಾಡಿಗೆ ಮಾತ್ರ ಪ್ರಧಾನಿ ಅಲ್ಲ ; ಶೋಭಾ ಕರಂದ್ಲಾಜೆ

Share News

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ತಮಿಳುನಾಡು, ಕರ್ನಾಟಕಕ್ಕೆ ಪ್ರಧಾನಿ ಅಲ್ಲ, ಬೇರೆ ರಾಜ್ಯಗಳ ಜಲ ವಿವಾದ ಕೂಡ ಪ್ರಧಾನಿಗಳು ಬಗೆಹರಿಸಬೇಕಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಹೇಳಿದ್ಧಾರೆ.

ಮದುವೆ ಸಮಾರಂಭದಲ್ಲಿ ಅಗ್ನಿ ದುರಂತ ; 100 ಮಂದಿ ಸಾವು!

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್‌ ಸರ್ಕಾರದ ಬೇಜವಾಬ್ದಾರಿಯಿಂದ ಕಾವೇರಿ ಸಮಸ್ಯೆ ಉದ್ಭವಿಸಿದೆ. ಈ ವಿಚಾರದಲ್ಲಿ ಮೋದಿ ಮಧ್ಯೆ ಪ್ರವೇಶಿಸೋಕೆ ಅವರು ಕೇವಲ ಕರ್ನಾಟಕ ಹಾಗೂ ತಮಿಳುನಾಡಿಗೆ ಪ್ರಧಾನಿ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

“ರಾಜ್ಯ ಕಾಂಗ್ರೆಸ್ ನಾಯಕರು ಪರಸ್ಪರ ಕಿತ್ತಾಟದಲ್ಲಿ ತೊಡಗಿದ್ದಾರೆ. ತಮಿಳುನಾಡನ್ನು ಓಲೈಸಲು ಕಾಂಗ್ರೆಸ್ ನಾಯಕರು ಮುಂದಾಗಿರಬೇಕು. ಕಾವೇರಿ ಕೊಳ್ಳದ ಅಧ್ಯಯನ ಸರಿಯಾಗಿ ಮಾಡದೇ ಇರಬಹುದು‌. ಈ ಕಾರಣದಿಂದಲೇ ಸರ್ಕಾರ ಪ್ರಾಧಿಕಾರಕ್ಕೆ ಸೂಕ್ತ ಮಾಹಿತಿ ನೀಡಿಲ್ಲ. ಸುಪ್ರೀಂ ಕೋರ್ಟ್‌ಗೆ ಸರಿಯಾದ ಅಂಕಿ ಅಂಶಗಳನ್ನು ನೀಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಸ್ತೆಬದಿ ಬಿದ್ದಿದ್ದ ಕಪ್ಪು ಚಿರತೆ ಮರಿಯನ್ನು ಬೆಕ್ಕು ಮರಿ ಎಂದು ಸಾಕಿದ ಯುವತಿ! ಇಲ್ಲಿದೆ ವಿಡಿಯೋ

ಕೇಂದ್ರ ಸರ್ಕಾರ ರಾಜ್ಯದ ಕನ್ನಡಪರ ಸಂಘಟನೆಗಳು ಮತ್ತು ರೈತರ ಜೊತೆಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಸುಪ್ರೀಂ ಕೋರ್ಟ್ ಗೆ ಹಾಗೂ ಪ್ರಾಧಿಕಾರಕ್ಕೆ ಸರಿಯಾಗಿ ಮಾಹಿತಿ ಯಾಕೆ ಕೊಟ್ಟಿಲ್ಲ ಎಂದು ನಾನು ಸಿಎಂ ಮತ್ತು ಡಿಸಿಎಂ ದೆಹಲಿಗೆ ಬಂದಾಗಲೂ ಕೇಳಿದ್ದೆ ಎಂದು ಕೇಂದ್ರ ಸಚಿವೆ ಹೇಳಿದ್ದಾರೆ.

ಇಂದು ಭಾರತ-ಆಸ್ಟ್ರೇಲಿಯಾ ತ್ರತೀಯ ಏಕದಿನ – ತಂಡಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಾಪಸ್!


Share News

Leave a Reply

Your email address will not be published. Required fields are marked *