Breaking News

ಪುತ್ತೂರು: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ; ಶಿಕ್ಷಕಿ ಸಾವು

Share News

ಪುತ್ತೂರು ಜನವರಿ 29: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ.

ಇದನ್ನೂ ಓದಿ: ಫೆ.27 ರಂದು 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ

ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್‌ ಪತ್ನಿ ಅನಿತಾ(35) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ ಪೋಳ್ಯ ಎಂಬಲ್ಲಿ ಏಕಾಏಕಿ ಬಂದ ಟಿಪ್ಪರ್ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂಬದಿ ಸವಾರೆ ಅನಿತಾ ಹಾಗೂ ಅವರು ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೊಳುವಾರು ಮಹಾವೀರ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮಗುವಿನ ಭುಜದ ಭಾಗಕ್ಕೆ ಸಣ್ಣ ಪುಟ್ಟ ಗಾಯವಾಗಿದ್ದು, ಸುರೇಶ್ ಕುಲಾಲ್ ಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರು ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಂಟ್ವಾಳ: ಬೆಂಕಿ ಅವಘಡಕ್ಕೆ ಸುಟ್ಟು ಮೃತಪಟ್ಟ ದಂಪತಿ


Share News

Leave a Reply

Your email address will not be published. Required fields are marked *