Breaking News

ಭಾರತ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಮರುನೇಮಕ!

Share News

ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಸಹಾಯಕ ಸಿಬ್ದಂದಿಯ ಗುತ್ತಿಗೆಯ ಅವಧಿಯನ್ನು ಮುಂದುವರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಪ್ರಕಟಿಸಿದೆ. ಬ್ಯಾಟಿಂಗ್ ಕೋಚ್‌ ವಿಕ್ರಮ್‌ ರಾಥೋಡ್‌, ಬೌಲಿಂಗ್‌ ಕೋಚ್‌ ಪರಾಸ್‌ ಮಾಂಬ್ರೆ ಸೇರಿದಂತೆ ಸಹಾಯಕ ಸಿಬ್ಬಂದಿಯನ್ನು ಕೂಡ ಭಾರತ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

2021ರ ಟಿ20 ವಿಶ್ವಕಪ್ ಬಳಿಕ ಭಾರತ ತಂಡದ ಹೆಡ್‌ ಕೋಚ್‌ ಹುದ್ದೆಯನ್ನು ಅಲಂಕರಿಸಿದ್ದ ರಾಹುಲ್‌ ದ್ರಾವಿಡ್‌, ಇತ್ತೀಚೆಗೆ ಅಂತ್ಯವಾಗಿದ್ದ ಏಕದಿನ ವಿಶ್ವಕಪ್‌ ಟೂರ್ನಿಯ ಬಳಿಕ ಅವರ ಅವಧಿ ಮುಗಿದಿತ್ತು. ಈ ಹಿನ್ನೆಲೆಯಲ್ಲಿ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ ಹಲವು ಫ್ರಾಂಚೈಸಿಗಳು ದ್ರಾವಿಡ್‌ ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿದೆ.

ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು..!

ದ್ರಾವಿಡ್‌ ಅವರ ಮಾರ್ಗದರ್ಶನದಲ್ಲಿ ಭಾರತ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಅಲ್ಲದೆ ಹಲವು ಪ್ರತಿಭಾವಂತ ಆಟಗಾರರು ಬೆಳಕಿಗೆ ಬಂದಿದ್ದಾರೆ. 2023ರ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲಿ ಹಾಗೂ 2023ರ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಭಾರತ ತಂಡ ರನ್ನರ್‌ ಅಪ್‌ಗೆ ತೃಪ್ತಿಪಟ್ಟುಕೊಂಡಿದೆ. ಹಾಗಾಗಿ ದ್ರಾವಿಡ್‌ ಅವರನ್ನು ಹಿರಿಯರ ತಂಡದಲ್ಲಿ ಉಳಿಸಿಕೊಳ್ಳುವ ಇಂಗಿತವನ್ನು ಹೊಂದಿದೆ.

ಜಯ ಶಾ-ರಾಹುಲ್‌ ದ್ರಾವಿಡ್‌ ಮಾತುಕತೆ

“ಕಳೆದ ವಾರ ಬಿಸಿಸಿಐ ಕಾರ್ಯದರ್ಶಿ ಜಯ ಶಾ ಅವರು ರಾಹುಲ್‌ ದ್ರಾವಿಡ್‌ ಅವರ ಇದೇ ವಿಷಯವನ್ನು ಚರ್ಚೆ ನಡೆಸಿದ್ದಾರೆ. ಹಾಗಾಗಿ ಬ್ಯಾಟಿಂಗ್ ದಿಗ್ಗಜನಿಗೆ ಹೊಸ ಗುತ್ತಿಗೆ ಸಿಗುವ ಸಾಧ್ಯತೆ ದಟ್ಟವಾಗಿದೆ. ಆದರೆ, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿಯೇ ರಾಹುಲ್‌ ದ್ರಾವಿಡ್‌ ಹೆಡ್‌ ಕೋಚ್‌ ಆಗಿ ಇರಬೇಕೆಂದು ಬಯಸುತ್ತಿದೆ,” ಎಂದು ಬಿಸಿಸಿಐ ಉನ್ನತ ಮೂಲಗಳು ತಿಳಿಸಿರುವುದನ್ನು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿತ್ತು.

“ರಾಹುಲ್‌ ದ್ರಾವಿಡ್‌ ಅವರ ಗುತ್ತಿಗೆ ಕಾರ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಆದರೆ, ದಕ್ಷಿಣ ಆಫ್ರಿಕಾ ಪ್ರವಾಸ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆ ಕಾರ್ಯಗಳು ಇಲ್ಲದ ಹೊರತಾಗಿಯೂ ರಾಹುಲ್‌ ದ್ರಾವಿಡ್‌ ಅವರು ಭಾರತ ತಂಡದಲ್ಲಿ ಇರಬೇಕೆಂದು ಬಿಸಿಸಿಐ ಬಯಸುತ್ತಿದೆ. ಟಿ20 ಸರಣಿಯಲ್ಲಿ ಇಲ್ಲದ ಹೊರತಾಗಿಯೂ ಟೆಸ್ಟ್‌ ಹಾಗೂ ಒಡಿಐ ಸರಣಿಯಲ್ಲಿ ಅವರು ಉಪಸ್ಥಿತಿ ತುಂಬಾ ಮುಖ್ಯ,” ಎಂದು ಮೂಲಗಳು ತಿಳಿಸಿದ್ದವು.

ಇದನ್ನೂ ಓದಿ: ಅತ್ತಾವರ : ಅಪಾರ್ಟ್ಮೆಂಟ್ ನ ಪ್ಲಾಟ್ ಒಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮಹಿಳೆ ಸಾವು!

ರೀನ್ ಸಿಗ್ನಲ್‌ ಕೊಟ್ಟ ರಾಹುಲ್‌ ದ್ರಾವಿಡ್‌

ರಾಹುಲ್‌ ದ್ರಾವಿಡ್‌ಗೆ ಭಾರತ ತಂಡದ ಹೆಡ್‌ ಕೋಚ್‌ ಅವಧಿಯನ್ನು ಮುಂದುವರಿಸಲು ಬಿಸಿಸಿಐ ಆಸಕ್ತಿ ತೋರಿದೆ. ಇದೀಗ ದ್ರಾವಿಡ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ತಮ್ಮ ಕುಟುಂಬದ ಸದಸ್ಯೆ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಂಡಿದ್ದಾರೆಂದು ತಿಳಿದು ಬಂದಿದೆ. ಒಂದು ವೇಳೆ ಅವರು ಬಿಸಿಸಿಐ ಆಫರ್‌ ಅನ್ನು ತಿರಸ್ಕರಿಸಿದ್ದರೆ, ಇದೀಗ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಹಂಗಾಮಿ ಕೋಚ್‌ ಆಗಿ ಕಾರ್ಯನಿರ್ವಹಿಸುತ್ತಿರುವ ವಿವಿಎಸ್‌ ಲಕ್ಷ್ಮಣ್‌ ಅವರನ್ನೇ ಪೂರ್ಣಾವಧಿಗೆ ಕೋಚ್‌ ಆಗುತ್ತಿದ್ದರು.

ಇನ್ನೆರಡು ವರ್ಷಗಳಲ್ಲಿ ದ್ರಾವಿಡ್‌ಗೆ ಕಠಿಣ ಸವಾಲು

ರಾಹುಲ್‌ ದ್ರಾವಿಡ್‌ಗೆ 2024ರ ಟಿ20 ವಿಶ್ವಕಪ್‌, ಪ್ರಸ್ತುತ ನಡೆಯುತ್ತಿರುವ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಹಾಗೂ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಸಿಗಲಿವೆ. ಈ ಮೂರರ ಪೈಕಿ ಕನಿಷ್ಠ ಐಸಿಸಿ ಟ್ರೋಫಿ ಗೆಲ್ಲಬೇಕೆಂಬುದು ಬಿಸಿಸಿಐನ ಉದ್ದೇಶ ಆಗಿದೆ. ಹಾಗಾಗಿ ಭಾರತ ತಂಡದ ಆಟಗಾರರ ಜೊತೆ ಹೊಂದಿಕೊಂಡಿರುವ ದ್ರಾವಿಡ್‌ ಅವರನ್ನೇ ಮುಂದುವರಿಸಲು ಬಿಸಿಸಿಐ ತೀರ್ಮಾನಿಸಿದೆ.

WATCH VIDEO ON YOUTUBE: ನಾಗನ ಆರಾಧನೆಯೊಂದಿಗೆ ಪ್ರಕೃತಿಯನ್ನು ಸಂರಕ್ಷಿಸುವ ಮುಖ್ಯ ಉದ್ದೇಶ ನಾಗಬನಗಳದ್ದು: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *