Breaking News

ಕಾಂಗ್ರೆಸ್ ನಲ್ಲಿ ಹೊಸ ಮುಖಗಳಿಗೆ ಮಣೆಹಾಕಲು ರಾಹುಲ್ ಗಾಂಧಿ ತೀರ್ಮಾನ. ತುಮಕೂರಿಗೆ ನಿಕೇತ್ ರಾಜ್, ಮಂಡ್ಯಕ್ಕೆ ರಮ್ಯ?

Share News

ಬೆಂಗಳೂರು: ಲೋಕಸಭಾ ಚುನಾವಣೆ 2024 ರ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕಾಂಗ್ರೆಸ್ ಬಹಳಷ್ಟು ಕಸರತ್ತು ನಡೆಸುತ್ತಿದೆ. ಈ ನಡುವೆ ಹಲವಾರು ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಹಾಕುವ ಸಾಧ್ಯತೆ ಇದೆ ಹೈಕಮಾಂಡ್ ಮೂಲಗಳಿಂದ ತಿಳಿದುಬಂದಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಂಸದೆ ರಮ್ಯ ರವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೊದಲು ಅವರ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ವಿಜಯ ಸಾಧಿಸಿದ್ದರು.

ಇದನ್ನೂ ಓದಿ: ಆಯಿಲ್‌ ತುಂಬಿದ್ದ ಟ್ಯಾಂಕರ್‌ ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ – ಧಗಧಗಿಸಿದ ಬೆಂಕಿ

ಇನ್ನು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ತನ್ನ ಅಭಿವೃದ್ಧಿ ಚಿಂತನೆಗಳ ಮೂಲಕ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿ ಮಾಡಿರುವ ನಿಕೇತ್ ರಾಜ್ ಮೌರ್ಯ ಅಭ್ಯರ್ಥಿಯಾಗುವುದು ಬಹುತೇಕ ಪಕ್ಕ ಎನ್ನಲಾಗುತ್ತಿದೆ. ಹೈಕಮಾಂಡ್ ಮೂಲಗಳ ಪ್ರಕಾರ ನಿಕೇತ್ ರಾಜ್ ರವರ ಹೆಸರು ಹೈಕಮಾಂಡ್ ವಲಯದಲ್ಲಿ ಗಂಭೀರವಾಗಿ ಪರಿಶೀಲನೆಯಲ್ಲಿದೆ ಎಂದು ತಿಳಿದುಬಂದಿದೆ.

ಈ ನಡುವೆ ಕೆಲವು ಲೋಕಸಭಾ ಕ್ಷೇತ್ರದಲ್ಲಿ ಸಚಿವರುಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಸಚಿವರುಗಳು ಹಿಂದೇಟು ಹಾಕುತ್ತಿರುವುದು ಹೊಸ ಬೆಳವಣಿಗೆಯಾಗಿದೆ.

ಇದನ್ನೂ ಓದಿ: ಪುತ್ತೂರು: ಮೈ ಮೇಲೆ ಪ್ರೇತ ಬರುತ್ತೆ ಎಂದು ಪತ್ನಿಯನ್ನು 3 ತಿಂಗಳಿಂದ ಕೊಠಡಿಯಲ್ಲಿ ದಿಗ್ಬಂಧನ ಮಾಡಿದ ಪತಿ

ಕಾಂಗ್ರೆಸ್ ಹೈಕಮಾಂಡ್ ಒಂದು ಸುತ್ತಿನ ಅಭ್ಯರ್ಥಿಗಳ ಪಟ್ಟಿಯನ್ನು ತರಿಸಿ ಪರಿಶೀಲಿಸಿದ್ದು, ಮಂಡ್ಯ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಂಡಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಹಿರಿಯ ಸಚಿವರಿಗೆ ಹಾಗೂ ಪಕ್ಷದ ನಾಯಕರಿಗೆ ಉಸ್ತುವಾರಿಯನ್ನು ನೀಡಿದ್ದು ಅವರು ಒಂದು ಹಂತದ ವರದಿಯ ಆಧಾರದ ಮೇಲೆ ಕೆಪಿಸಿಸಿ ಹೈಕಮಾಂಡ್ಡಿಗೆ ವರದಿ ಸಲ್ಲಿಸಿದೆ ಎಂದು ತಿಳಿದುಬಂದಿದೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *