Breaking News

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಮುನ್ಸೂಚನೆ!

Share News

ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ಅಂದ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ; ಸಾವಿನ ಸಂಖ್ಯೆ 14 ಕ್ಕೆ ಏರಿಕೆ – 100 ಕ್ಕೂ ಅಧಿಕ ಮಂದಿಗೆ ಗಾಯ!

ಪಣಂಬೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ!

ಈ ಬಾರಿ ಮುಂಗಾರಿನಲ್ಲಿ ಮಳೆ ತುಂಬಾ ಕಡಿಮೆಯಾಗಿದೆ, ಹಲವು ಜಿಲ್ಲೆಗಳು ಬರದಿಂದ ಕಂಗೆಟ್ಟಿವೆ, ಹಿಂಗಾರು ಮಳೆಯಾದರೂ ಉತ್ತಮವಾಗಿ ಬಂದಲ್ಲಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೊಂಚ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WATCH VIDEO ON YOUTUBE: ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಮಹಿಷಾ ಮರ್ದಿನಿ ನೃತ್ಯ ರೂಪಕ


Share News

Leave a Reply

Your email address will not be published. Required fields are marked *