Breaking News

ಪ್ರೀತಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

Share News

ಹಾಸನ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ.

ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ

ಬಂಧಿತ ಆರೋಪಿಯನ್ನು ಜೀವನ್ (21) ಎಂದು ಗುರುತಿಸಲಾಗಿದೆ. ಆರೋಪಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಒಬ್ಬಳ ಜೊತೆ ಸಲುಗೆಯಿಂದ ಇದ್ದ. ಈ ವೇಳೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈಗ ವಿದ್ಯಾರ್ಥಿನಿ ಐದು ತಿಂಗಳ ಗರ್ಭಿಣಿಯಾದ ಬಳಿಕ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Vedio : ಎಕ್ಸ್‌ಪ್ರೆಸ್‌ವೇನಲ್ಲಿ ಸ್ಲೀಪರ್ ಬಸ್‌ಗೆ ಬೆಂಕಿ ತಗುಲಿ 2 ಸಚಿವ ದಹನ, 12 ಜನರಿಗೆ ಗಾಯ

ಸಮಾಜಕ್ಕೆ ಹೆದರಿ ವಿದ್ಯಾರ್ಥಿನಿ ತನ್ನ ಮೇಲಾಗಿರುವ ದೌರ್ಜನ್ಯವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಈಗ ಆಕೆಯ ದೇಹದಲ್ಲಾದ ಬದಲಾವಣೆಯ ಬಳಿಕ ಆತಂಕಗೊಂಡ ವಿದ್ಯಾರ್ಥಿನಿ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ನಂತರ ಬಾಲಕಿಯ ಪೋಷಕರು ಹಾಸನ (Hassan) ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯ ವಿರುದ್ಧ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 


Share News

Leave a Reply

Your email address will not be published. Required fields are marked *