Breaking News

ಹಿರಿಯ ಪತ್ರಕರ್ತ ಕೆ.ಎಸ್ ಸಚ್ಚಿದಾನಂದ ಮೂರ್ತಿ ನಿಧನ

Share News

ಬೆಂಗಳೂರು: ಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ಮೂರ್ತಿ (Sachidananda Murthy) ಅವರು ಇಂದು (ಶುಕ್ರವಾರ) ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದೆ ಶ್ವಾಸಕೋಶ ಕಸಿಗೆ ಒಳಗಾಗಿದ್ದರು. ಇದೀಗ ಮತ್ತೆ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಸಚ್ಚಿದಾನಂದಮೂರ್ತಿ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕೋಲಾರ (Kolar) ಮೂಲದ ಸಚ್ಚಿದಾನಂದ ಮೂರ್ತಿಯವರು 1982 ರಲ್ಲಿ ದಿ ವೀಕ್ (The Week) ಸೇರಿದ್ದು, ಬಳಿಕ ಸ್ಥಾನಿಕ ಸಂಪಾದಕರಾಗಿ ಕರ್ತವ್ಯ ನಿರ್ವಹಿಸಿದ್ದರು. ದೆಹಲಿಯಲ್ಲಿ 4 ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಡಿಟರ್ಸ್ ಗಿಲ್ಡ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಸದ್ಯ ಸಚ್ಚಿಯವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇನ್ನು ಸಚ್ಚಿ ನಿಧನಕ್ಕೆ ಮಾಧ್ಯಮ ರಂಗ ಕಂಬನಿ ಮಿಡಿದಿದೆ. ಜಯನಗರ ಟಿ ಬ್ಲಾಕ್‍ನಲ್ಲಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಜೆ 6 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬುದಾಗಿ ಅವರ ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಾರತ್ ಬ್ಯಾಂಕ್ ನ ನೂತನ ಕಾರ್ಯಧ್ಯಕ್ಷರಾಗಿ ಸೂರ್ಯಕಾಂತ್ ಜೆ.ಸುವರ್ಣ ಆಯ್ಕೆ

ಮಾಧ್ಯಮ ವಲಯದಲ್ಲಿ ಸಚ್ಚಿ ಎಂದೇ ಖ್ಯಾತಿ ಪಡೆದಿದ್ದ ಸಚ್ಚಿದಾನಂದ ಅವರು ಕಳೆದ ವರ್ಷ ನಿವೃತ್ತಿ ಹೊಂದಿದ್ದರು. ನಿವೃತ್ತಿಯಾಗುವವರೆಗೂ ಮಲಯಾಳ ಮನೋರಮಾ ಗ್ರೂಪ್‍ನಲ್ಲೇ ಕಾರ್ಯನಿರ್ವಹಿಸಿದ್ದರು. ರಾಷ್ಟ್ರೀಯ, ಅಂತಾರಾಷ್ಟ್ರೀಯ ರಾಜಕೀಯ ವಿಶ್ಲೇಷಣೆಯಲ್ಲಿ ಸಿದ್ಧಹಸ್ತರಾಗಿದ್ದರು. ನ್ಯೂ ಡೆಲ್ಲಿ ಅಂಕಣದ ಮೂಲಕ ಮನೆಮಾತಾಗಿದ್ದರು. ಸದ್ಯ ಸಚ್ಚಿಯವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇನ್ನು ಸಚ್ಚಿ ನಿಧನಕ್ಕೆ ಮಾಧ್ಯಮ ರಂಗ ಕಂಬನಿ ಮಿಡಿದಿದೆ.

ಇದನ್ನೂ ಓದಿ: 75 ಲಕ್ಷ ಮೌಲ್ಯದ 1.25 ಕೆ.ಜಿ ಚಿನ್ನ ಎಗರಿಸಿದ್ದ ಸೇಲ್ಸ್ ಮನ್​​ಗಳಿಬ್ಬರ ಬಂಧನ!

ಸಿಎಂ ಸಂತಾಪ: ಸಚ್ಚಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಎಕ್ಸ್‍ನಲ್ಲಿ ಬರೆದುಕೊಂಡಿರುವ ಸಿಎಂ, ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನಗೆ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಹಿರಿಯ ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು. ರಾಜ್ಯ-ರಾಷ್ಟ್ರಗಳ ವಿದ್ಯಮಾನಗಳ ಜ್ಞಾನಕೋಶದಂತಿದ್ದ ಸಚ್ಚಿದಾನಂದ ಮೂರ್ತಿಯವರ ಸಾವು ಮಾಧ್ಯಮರಂಗಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

WATCH VIDEO ON YOUTUBE: ನಾಗಬನ ನಮ್ಮ ಪೂರ್ವಜರ ಪರಿಸರ ಸಂರಕ್ಷಣೆಯ ಕಾಳಜಿಯ ನಾಗಬನವಾಗಬೇಕಾಗಿದೆ: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *