Breaking News

ಶಿವಮೊಗ್ಗ : ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ..!

Share News

ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಶಿವಮೊಗ್ಗ  ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ನಡೆದಿದೆ. ಮಲ್ಲೇಶ್ (35) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ ; ಕುಮಾರಸ್ವಾಮಿ ಸ್ಪಷ್ಟನೆ…!

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಮುಂದಿನ ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗ ಎಸ್​​ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ

ಇತ್ತೀಚೆಗಷ್ಟೇ, ಅಂದರೆ ಅಕ್ಟೋಬರ್ 20 ರಂದು ಸೈಯದ್ ರಜಿಖ್ (30) ಎಂಬಾತನನ್ನು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ (Bhadravati) ಪಟ್ಟಣದಲ್ಲಿ ನಡೆದಿತ್ತು. ಹಳೆ ವೈಷಮ್ಯವೇ ಕೊಲೆಗೆ ಕಾರಣ ಎಂದು ತಿಳಿದಬಂದಿತ್ತು.

WATCH VIDEO ON YOUTUBE: ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಮಹಿಷಾ ಮರ್ದಿನಿ ನೃತ್ಯ ರೂಪಕ

 


Share News

Leave a Reply

Your email address will not be published. Required fields are marked *