Breaking News

ಪುತ್ರನ ಹೇಳಿಕೆಯೇ ಸಿಎಂ ಸಿದ್ದರಾಮಯ್ಯ ಭವಿಷ್ಯಕ್ಕೆ ಮುಳುವಾಗುತ್ತಾ?

Share News

ಬೆಂಗಳೂರು, ಸೆಪ್ಟೆಂಬರ್‌ 20: ತಂದೆಗಾಗಿ 2023 ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನ ತ್ಯಾಗ ಮಾಡಿದ್ದ ಮಾಜಿ ಶಾಸಕ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭವಿಷ್ಯಕ್ಕೆ ಮುಳುವಾಗುವ ಸಾಧ್ಯತೆ ಇದೆ. ಹೌದು, 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಕ್ಕರ್, ಇಸ್ತ್ರಿಪೆಟ್ಟಿಗೆ ಹಂಚಿದ್ದರಿಂದ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಇದೀಗ ಭಾರೀ ವೈರಲ್ ಆಗುತ್ತಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಇನ್ನೂ ಪುತ್ರನ ಹೇಳಿಕೆಯಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕುತ್ತು ತರುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಮಾಜಿ ಶಾಸಕ ಹಾಗೂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಅಸ್ತ್ರವನ್ನಾಗಿಸಿಕೊಂಡಿರುವ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ ಎಂದು ತಿಳಿದು ಬಂದಿದೆ.
2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವರುಣಾ ಕ್ಷೇತ್ರದಲ್ಲಿ ಮತದಾರರಿಗೆ ಆಮಿಷವೊಡಿದ್ದನ್ನು ಸಮಾರಂಭವೊಂದರಲ್ಲಿ ಖುದ್ದು ಸಿಎಂ‌ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ. ಇತ್ತ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಚರ್ಚಿಸಿರುವ ರಾಜ್ಯ ಬಿಜೆಪಿ ಅಲರ್ಟ್ ಆಗಿದ್ದು, ಈ ಹೇಳಿಕೆ ಆಧರಿಸಿಯೇ ಚುನಾವಣಾ ಆಯೋಗಕ್ಕೆ ದೂರು ಕೊಡಲು ಸಜ್ಜಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಯಾವುದೇ ಚುನಾವಣೆಯಲ್ಲಿಯೂ ಮತದಾರರಿಗೆ ಹಣ, ಮದ್ಯ, ಉಡುಗೊರೆ ನೀಡುವಂತಿಲ್ಲ. ಒಂದು ವೇಳೆ ಉಡುಗೊರೆ ನೀಡಿದ್ದೇ ನಿಜವಾದರೆ ಅದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸಬಹುದು. ಈ ಹಿನ್ನೆಲೆಯಲ್ಲಿ ಬಿಜೆಪಿ ದೂರು ನೀಡಲು ಮುಂದಾಗಿದೆ. ಇದಕ್ಕೆ ಬೇಕಾದ ದಾಖಲೆಗಳುನ್ನು ರೆಡಿ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಊಟದ ನಂತರ ಬಾಳೆಹಣ್ಣು ತಿನ್ನುವುದರಿಂದ ಏನು ಲಾಭ?

ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
ಹೌದು, ನಂಜನಗೂಡಿನಲ್ಲಿ ಶುಕ್ರವಾರ ನಡೆದ ‌ತಾಲ್ಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ನೀಡಿರುವ ಈ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 2023 ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು: ಬೊಮ್ಮಾಯಿ
2023 ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಆಗ್ರಹಿಸಿದ್ದಾರೆ. ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತಿಂದ್ರ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿಯವರು, ಈ ಕುರಿತು ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುಬಾವಣಾ ಆಯೋಗ ಗಮನಿಸಬೇಕಾಗುತ್ತದೆ.
ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ. ಡಾ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.

Share News

Leave a Reply

Your email address will not be published. Required fields are marked *