Breaking News

ಸುಧಾ ಮೂರ್ತಿ ಹೆಸರು ಬಳಸಿ ವಂಚನೆ ; ಇಬ್ಬರು ಯುವತಿಯರ ವಿರುದ್ಧ ದೂರು ದಾಖಲು!

Share News

ಬೆಂಗಳೂರು: ಇನ್ಫೋಸಿಸ್  ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ  ಅವರ ಹೆಸರು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸುಧಾಮೂರ್ತಿ ಅವರ ಪರ್ಸನಲ್ ಅಸಿಸ್ಟೆಂಟ್ ಮಮತಾ ಸಂಜಯ್ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ದೂರು ದಾಖಲಾಗಿದೆ.

ನೇತ್ರಾವತಿ ಸೇತುವೆ ಮೇಲೆ ಮೀನು ಸಾಗಿಸುವ ಪಿಕ್-ಅಪ್ ವಾಹನ ಪಲ್ಟಿ ; ಚಾಲಕ ಪಾರು!

ಕೆಕೆಎನ್‌ಸಿ ಯಿಂದ 50ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರಿಗೆ ಆಹ್ವಾನಿಸಲಾಗಿತ್ತು. ಆದರೆ ಅವರು ಇಮೇಲ್ ಮೂಲಕ ಅಮೆರಿಕದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ ಎಂದು ಸಂದೇಶ ಕಳುಹಿಸಿದ್ದರು. ಈ ನಡುವೆ ಸುಧಾಮೂರ್ತಿಯವರ ಫೋಟೋಗಳನ್ನು ಬಳಸಿಕೊಂಡು ಜಾಹೀರಾತುಗಳನ್ನು ನೀಡಲಾಗಿತ್ತು. ಇದನ್ನು ಪ್ರಶ್ನಿಸಿದಾಗ ವಂಚನೆ ಬೆಳಕಿಗೆ ಬಂದಿದೆ.

ಸೆ. 26ರಂದು ಬೆಂಗಳೂರು ಬಂದ್‌; 150ಕ್ಕೂ ಅಧಿಕ ಸಂಘಟನೆಗಳ ಜಂಟಿ ಕರೆ!

ಮೂರ್ತಿ ಟ್ರಸ್ಟ್ ನ ಕಚೇರಿ ಎಂದು ಹೆಸರು ಸೃಷ್ಠಿಸಿ ಸುಧಾಮೂರ್ತಿಯವರ ಅಸಿಸ್ಟೆಂಟ್ ಎಂದು ವಂಚಿಸಿರುವ ಆರೋಪ ಕೇಳಿ ಬಂದಿದೆ. ಆರೋಪಿ ಲಾವಣ್ಯ, ಕಾರ್ಯಕ್ರಮಕ್ಕೆ ಸುಧಾಮೂರ್ತಿ ಮೇಡಂ ಬರುತ್ತಾರೆ ಎಂದು ಹೇಳಿ ವಂಚನೆ ಎಸಗಿದ್ದಾರೆ.

ಹೀಗೆ ಅಮೆರಿಕದಲ್ಲಿ ಮೀಟ್ ಅಂಡ್ ಗ್ರೀಟ್ ವಿತ್ ಡಾ. ಸುಧಾಮೂರ್ತಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಟಿಕೆಟ್ ಮಾರಾಟ ಮಾಡಿದ್ದಾರೆ. ಪ್ರತಿ ಟಿಕೆಟ್‌ಗೆ 40 ಡಾಲರ್ ಪಡೆದಿರುವುದಾಗಿ ಆರೋಪಿಸಲಾಗಿದೆ. ಘಟನೆ ಸಂಬಂಧ ಸದ್ಯ ಜಯನಗರ ಠಾಣೆಯಲ್ಲಿ ಐಟಿ ಆಕ್ಟ್ 66ಸಿ, 66ಡಿ ಹಾಗೂ ಐಪಿಸಿ 419, 420 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಶುದ್ಧ ಗಾಣದ ಎಣ್ಣೆ ತೆಗೆಯುವ ಕಟಪಾಡಿಯ ಮಿಲ್!


Share News

Leave a Reply

Your email address will not be published. Required fields are marked *