Breaking News

ಸುಳ್ಯ: ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ಸಾವು.!

Share News

ಸುಳ್ಯ, ಡಿ 16 : ವಾಹನ ಚಾಲನೆ ಮಾಡಿಕೊಂಡು ಬರುತ್ತಿದ್ದ ಸಂದರ್ಭ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು ಮೃತಪಟ್ಟ ಘಟನೆ ಪೈಚಾರುನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45) ಮೃತರು.

ಇದನ್ನೂ ಓದಿ: ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್!!

ಇವರು ಬೆಳ್ತಂಗಡಿಯಲ್ಲಿ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಮಡಿಕೇರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಅಳವಡಿಸಲಾಗಿದ್ದ ಶಾಮಿಯಾನವನ್ನು ತರಲೆಂದು ಮಡಿಕೇರಿಗೆ ಗುರುವಾರ ರಾತ್ರಿ ಹೊರಟ್ಟಿದ್ದರು. ವಾಹನ ಸುಳ್ಯದ ಪೈಚಾರು ಸಮೀಪ ಬರುತ್ತಿದ್ದಂತೆ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅಲ್ಲೇ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಬಳಿಯಲ್ಲಿ ಕುಳಿತಿದ್ದ ವ್ಯಕ್ತಿಗೆ ವಿಷಯ ತಿಳಿಸಿದ್ದಾರೆ.

ಇದನ್ನೂ ಓದಿ: ಸುಳ್ಯ: ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ

ಆತ ತಕ್ಷಣ ಆಸ್ಪತ್ರೆಗೆ ಕರೆ ತರುವ ವೇಳೆ ದಾರಿ ಮೃತಪಟ್ಟಿದ್ದಾರೆ.

WATCH VIDEO ON YOUTUBE: ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *