Breaking News

ಶಾಸಕ ಹರೀಶ್ ಪೂಂಜಾ ಅಭಿಮಾನಿ ಸಹಿತ ಮೂವರನ್ನು ಅಮಾನತುಗೊಳಿಸಿದ ಬೆಳ್ತಂಗಡಿ ಬಿಜೆಪಿ!

Share News

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಅಭಿಮಾನಿಯಾಗಿ ಅವರ ಹೆಸರನ್ನೇ ಕೇಶವಿನ್ಯಾಶ ಮಾಡಿಸಿಕೊಂಡು ಭಾರಿ ಪ್ರಚಾರ ಪಡೆದಿದ್ದ ಬಿಜೆಪಿ ಕಾರ್ಯಕರ್ತ ಸೇರಿ  ಮೂವರನ್ನು ಬೆಳ್ತಂಗಡಿ ಬಿಜೆಪಿ ಅಮಾನತುಗೊಳಿಸಿದೆ.

ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ. ಬಿಜೆಪಿ ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ವಸಂತಿ ಕಡ್ಡಿಬಾಗಿಲು ಮನೆ(ನೆರಿಯ ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷೆ), ನೆರಿಯ ಗ್ರಾಮದ ಬೂತ್ ಸಮಿತಿ ಅಧ್ಯಕ್ಷೆ ಕುಶಾಲ ಕಡ್ಡಿಬಾಗಿಲು ಮನೆ( ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯೆ), ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷ ಸಚಿನ್ ಅಣಿಯೂರು ಕುಲೆನಾಡಿ ಮನೆ (ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯ) ಅಮಾನತುಗೊಂಡವರು.

ತಕ್ಷಣದಿಂದ ಅನ್ವಯವಾಗುವಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಶಾಸಕರ  ಹೆಸರನ್ನೇ ಕೇಶವಿನ್ಯಾಶ ಮಾಡಿಸಿಕೊಂಡು ಭಾರಿ ಪ್ರಚಾರವಾಗಿತ್ತು. ಇಷ್ಟು ಅಭಿಮಾನಿಯನ್ನು ವಜಾಗೊಳಿಸಿದರ ಹಿಂದೆ ಬಲವಾದ ಕಾರಣವಿದೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.


Share News

Leave a Reply

Your email address will not be published. Required fields are marked *