Breaking News

Death

ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು

ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು

ಹರಿಯಾಣ, ಜ 27: ದೆಹಲಿಯ ಉನ್ನತ ಅಧಿಕಾರಿ ಪುತ್ರನನ್ನು ಆತನ ಸ್ನೇಹಿತರೇ ಹತ್ಯೆ ಮಾಡಿರುವ ಘಟನೆ ಹರಿಯಾಣದ ಸೋನೆಪತ್ ನಲ್ಲಿ ನಡೆದಿದೆ. ವಕೀಲರಾದ ಲಕ್ಷ್ಯ ಚೌಹಾಣ್ ಅವರು ದೆಹಲಿಯ ಸಹಾಯಕ ಪೊಲೀಸ್ ಆಯುಕ್ತ ಯಶ್ಪಾಲ್ ಸಿಂಗ್ ಅವರ ಪುತ್ರ. ಲಕ್ಷ್ಯ ಅವರ ಇಬ್ಬರು ಸ್ನೇಹಿತರಾದ ವಿಕಾಸ್ ಭಾರದ್ವಾಜ್ ಹಾಗೂ ಅಭಿಷೇಕ್ ಎಂಬುವವರು ಅವರನ್ನು ಕಾಲುವೆಗೆ ತಳ್ಳಿ ಹತ್ಯೆ ಮಾಡಿದ್ದರು. ಲಕ್ಷ್ಯ ಅವರ ಹತ್ಯೆಗೆ ಹಣಕಾಸಿನ ವ್ಯವಹಾರ ಇರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ….

  Read More
  ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ

  ಪುತ್ತೂರು: ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಮೃತಪಟ್ಟ ಅಕ್ಕ

  ಪುತ್ತೂರು: ಲಿವರ್‌ ವೈಫಲ್ಯದಿಂದ ಆಸ್ಪತ್ರೆಯಲ್ಲಿದ್ದ ನೆಹರೂ ನಗರದ ದಿ| ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಲಿವರ್ ಹಾನಿಗೀಡಾಗಿ ಬದುಕುಳಿಸುವ ಎಲ್ಲ ಪ್ರಯತ್ನದ ನಡಯವೆಯೂ ಅವರು ಮೃತರಾಗಿದ್ದಾರೆ. ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ ಜಾಂಡೀಸ್‌ ಜ್ವರ ಬಾಧಿಸಿದ್ದ ಐಶ್ವರ್ಯ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ…

   Read More
   ಮಂಗಳೂರು: 'ಯಕ್ಷರಂಗದ ರಾಜ' ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

   ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

   ಮಂಗಳೂರು, ಜ 24: “ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು. ಇದನ್ನೂ ಓದಿ: ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು…

    Read More
    ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಸಾವು

    ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಸಾವು

    ಬೆಳ್ತಂಗಡಿ, ಜ 22: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಒಬ್ಬನೇ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಜ.22 ರಂದು ಬೆಳ್ತಂಗಡಿ ಮನೆಯ ತೋಟದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿದೆ. ಇದನ್ನೂ ಓದಿ: ಸುಳ್ಯ: ಆಕಸ್ಮಿಕ ಬೆಂಕಿಗೆ ಅಂಗಡಿಯೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ…

     Read More
     ಬಂಟ್ವಾಳ: ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತ್ಯು...!

     ಬಂಟ್ವಾಳ: ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತ್ಯು…!

     ಬಂಟ್ವಾಳ: ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ. ಇದನ್ನೂ ಓದಿ: ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕನಾಗಿದ್ದಾನೆ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ . ಕೂಡಲೇ…

      Read More
      ಮಂಗಳೂರು: ಖ್ಯಾತ ಸಾಹಿತಿ ಜಾನಪದ ತಜ್ಞ ಅಮೃತ ಸೋಮೇಶ್ವರ ಇನ್ನಿಲ್ಲ.!

      ಮಂಗಳೂರು: ಖ್ಯಾತ ಸಾಹಿತಿ ಜಾನಪದ ತಜ್ಞ ಅಮೃತ ಸೋಮೇಶ್ವರ ಇನ್ನಿಲ್ಲ.!

      ಮಂಗಳೂರು ಡಿಸೆಂಬರ್ 06: ಕನ್ನಡದ ಖ್ಯಾತ ಸಾಹಿತಿ ಯಕ್ಷಗಾನ ಪ್ರಸಂಗ ಕರ್ತೃ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ(89) ಇಂದು ಬೆಳಿಗ್ಗೆ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ ಕನ್ನಡ, ತುಳು ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ, ಸಮಾಜಮುಖಿ ಚಂತನೆಯುಳ್ಳ ಓರ್ವ ಸಹೃದಯಿಯಾಗಿ ಅವರು ಕರ್ನಾಟಕದ ಜನರಿಗೆ ಪರಿಚಿತರಾಗಿದ್ದರು. ಇದನ್ನೂ ಓದಿ: ರಾಜ್ಯದ ಜನರಿಗೆ ಮತ್ತೊಮ್ಮೆ ವಿದ್ಯುತ್‌ ಬೆಲೆಯೇರಿಕೆಯ ಬಿಸಿ ತಾಗುವ ಸಾಧ್ಯತೆ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1953 ಸೆಪ್ಟಂಬರ್ 27 ರಂದು…

       Read More
       ಟ್ರ್ಯಾಕ್ಟರ್ ಮತ್ತು ಕಾರು ಮುಖಾಮುಖಿ ಢಿಕ್ಕಿ ; ಯುವಕ ಮೃತ್ಯು..!

       ಟ್ರ್ಯಾಕ್ಟರ್ ಮತ್ತು ಕಾರು ಮುಖಾಮುಖಿ ಢಿಕ್ಕಿ ; ಯುವಕ ಮೃತ್ಯು..!

       ಚಿಕ್ಕಮಗಳೂರು: ಟ್ರ್ಯಾಕ್ಟರ್ ಮತ್ತು ಕಾರು ಮುಖಾಮುಖಿ ಢಿಕ್ಕಿಯಾಗಿ ಯುವನೋರ್ವ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ನಡೆದಿದೆ. ಇದನ್ನೂ ಓದಿ: ಪತಿಯ ಎದೆಗೆ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ..! ಬೇಲೂರು ತಾಲ್ಲೂಕು ಚೀಕನಹಳ್ಳಿ ಗ್ರಾಮದ ಕೀರ್ತಿ(21) ಮೃತ ಯುವಕನಾಗಿದ್ದಾನೆ. ಕೀರ್ತಿ ಮೂಡಿಗೆರೆ ಸಮೀಪದ ಚಿಕ್ಕಳ್ಳ ಎಂಬಲ್ಲಿ ಕಾಫಿ ಎಸ್ಟೇಟ್ ಒಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.‌ ಗುರುವಾರ ಮಧ್ಯಾಹ್ನ ಚೀಕನಹಳ್ಳಿ ತನ್ನ ಮನೆಯಿಂದ ಚಿಕ್ಕಳ್ಳದ ತೋಟಕ್ಕೆ ಮಾರುತಿ 800 ಕಾರಿನಲ್ಲಿ…

        Read More
        ಪುತ್ತೂರು: ಬಸ್ಸಿನಡಿಗೆ ಬಿದ್ದು ಪ್ರಯಾಣಿಕ ದಾರುಣ ಸಾವು!

        ಪುತ್ತೂರು: ಬಸ್ಸಿನಡಿಗೆ ಬಿದ್ದು ಪ್ರಯಾಣಿಕ ದಾರುಣ ಸಾವು!

        ಪುತ್ತೂರು, ಡಿಸೆಂಬರ್ 08: ಬಸ್ಸಿನಡಿಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಕರ್ನಾಟಕ-ಕೇರಳ ಗಡಿಪ್ರದೇಶವಾದ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಇದನ್ನೂ ಓದಿ: ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ! ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಕುಂಞರಾಮ ಮಣಿಯಾಣಿ (68) ಮೃತಪಟ್ಟವರು. ಕೇರಳದ ಅಡೂರಿನಿಂದ ಮುಳ್ಳೇರಿಯಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಬಂದು ಗಾಳಿಮುಖದಲ್ಲಿ ಇಳಿದ ಕುಂಞರಾಮ ಅವರು, ಬಸ್ಸಿನಿಂದ ಇಳಿದು ಬಸ್ಸಿನ ಎದುರು ಭಾಗದ ಮೂಲಕವಾಗಿ ರಸ್ತೆ ದಾಟುತ್ತಿದ್ದ…

         Read More
         ಮೂಡಬಿದಿರೆ: ಭೀಕರ ಅಪಘಾತಕ್ಕೆ ಯುವಕ ಬಲಿ

         ಮೂಡಬಿದಿರೆ: ಭೀಕರ ಅಪಘಾತಕ್ಕೆ ಯುವಕ ಬಲಿ

         ಮೂಡಬಿದಿರೆ, ಡಿ 7: ಹುಟ್ಟು ಹಬ್ಬದ ಹಿಂದಿನ ದಿನವೇ ಅಪಘಾತಕ್ಕೆ ಯುವಕನೋರ್ವ ಬಲಿಯಾದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ. ಇದನ್ನೂ ಓದಿ: ಸಹಾಯಕ-ಡಿ-ಕ್ಯಾಂಪ್ (ADC) ಆಗಿ ನೇಮಕಗೊಂಡ ಮೊದಲ ಮಹಿಳಾ ಭಾರತೀಯ ಸಶಸ್ತ್ರ ಪಡೆ ಅಧಿಕಾರಿ ಮನಿಶಾ ಪಾಧಿ ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್…

          Read More
          ಕಾರು ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ ; ಓರ್ವ ಸಾವು!

          ಕಾರು ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ ; ಓರ್ವ ಸಾವು!

          ಚಿಕ್ಕಬಳ್ಳಾಪುರ: ಕಾರು (Car) ಮತ್ತು ಟಾಟಾ ಏಸ್‌ನ (Tata Ace) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ. ಇದನ್ನೂ ಓದಿ: SSLC ಮತ್ತು ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ…! ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ತಾಂಡಾ ಬಳಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಬೆಂಗಳೂರಿನ (Bengaluru) ಬಗಲಗುಂಟೆ ನಿವಾಸಿ ಶಿವಕುಮಾರ್ (32) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೋರ್ವ ಅನಂತರಾಮ್ (37) ಗಂಭೀರ…

           Read More