ಬಂಟ್ವಾಳ, ಡಿ 29 : ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳು ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆ ನಡೆದಿದೆ. ಬಿಸಿರೋಡಿನ ಕೈಕಂಬ ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಾತ್ರಿ 8 ಗಂಟೆ ವೇಳೆ ಅಪಘಾತ ನಡೆದಿತ್ತು. ಇಲ್ಲಿನ ಸ್ಥಳೀಯ ನಿವಾಸಿ ಚೈತ್ರ (22 ) ಮೃತಪಟ್ಟ ಯುವತಿ. ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಅವರು ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ…