Breaking News

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ಬಿಟ್ಟು ಉಳಿದ 4 ವಿಮಾನ ನಿಲ್ದಾಣಕ್ಕೆ ಹೆಸರು ಶಿಫಾರಸು ಮಾಡಿದ ಕಾಂಗ್ರೆಸ್ ಸರ್ಕಾರ!

Share News

ಬೆಂಗಳೂರು: ಹುಬ್ಬಳ್ಳಿ ವಿಮಾನ ನಿಲ್ದಾಣ ಸಂಗೊಳ್ಳಿ ರಾಯಣ್ಣ ಹೆಸರು, ಬೆಳಗಾವಿ ಮಾನ ನಿಲ್ದಾನಕ್ಕೆ ವೀರರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆವಿ ಪುಟ್ಟಪ್ಪ, ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರನ್ನು ಇಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಶಿಫಾರಸು ಮಾಡಿದೆ.

ಇದನ್ನೂ ಓದಿ: ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್!!

ಆದರೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರನ್ನು ಇಡುವ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಶಿಫಾರಸು ಮಾಡಿಲ್ಲ. ಈ ಬಗ್ಗೆ ಸದನದಲ್ಲಿ ಶಾಸಕರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಹರೀಶ್ ಕುಮಾರ್ ಪ್ರಸ್ತಾಪಿಸಿದರು. ಈ ನಡುವೆ ಸ್ಪೀಕರ್ ಯುಟಿ ಖಾದರ್ ರಾಣಿ ಅಬ್ಬಕ್ಕ ಅವರ ಹೆಸರನ್ನು ಇಡಬಹುದು ಎಂಬ ಸಲಹೆ ಇದೆ, ಈ ಕಾರಣದಿಂದ ಪರಿಶೀಲಿಸಿ ತೀರ್ಮಾನಿಸಬೇಕಾಗಿದೆ ಎಂದು ಸದನದಲ್ಲಿ ನುಡಿದಿದ್ದಾರೆ.

ಇದನ್ನೂ ಓದಿ: ಸುಳ್ಯ: ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ

ಕಾಂಗ್ರೆಸ್ ಸರ್ಕಾರದ ಈ ತೀರ್ಮಾನದ ವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್ ಗರಂ ಆಗಿದ್ದಾರೆ. ಈ ನಡುವೆ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರನ್ನ ಇಡಬೇಕು ಎಂದು ಾಂಗ್ರೆಸ್‌ನ ಅಬ್ಬಯ್ಯ ಪ್ರಸಾದ್ ವಾದಿಸಿದ್ದಾರೆ.

ಈ ಬೆಳವಣಿಗೆಯ ನಡುವೆ ಕೋಟಿ ಚೆನ್ನಯ್ಯರ ಹೆಸರು ಬಿಜೆಪಿ ಹಾಗೂ ಕಾಂಗ್ರೆಸ್ನ ನಡುವೆ ದೊಡ್ಡ ವಿವಾದ ಸೃಷ್ಟಿಸುವ ಲಕ್ಷಣಗಳು ಕಂಡುಬರುತ್ತಿವೆ.

WATCH VIDEO ON YOUTUBE: ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *