Breaking News

ಶ್ರೀ ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠಾಪನೆ ವಿಧಿಗಳಿಗೆ ಇಂದಿನಿಂದ ಚಾಲನೆ

Share News

ಅಯೋಧ್ಯೆ, ಜ 16: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಏತನ್ಮಧ್ಯೆ , ಶ್ರೀ ರಾಮ ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠಾಪನೆ ವಿಧಿಗಳಿಗೆ ಇಂದಿನಿಂದ ಚಾಲನೆ ಸಿಗಲಿದೆ.

ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಜ.18 ರಂದು ರಾಮಲಲ್ಲಾ ನ ವಿಗ್ರಹವನ್ನು ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಅಪರಿಚಿತ ಕಾರೊಂದು ಡಿಕ್ಕಿ; ಪರಾರಿಯಾದ ಚಾಲಕ ಪೊಲೀಸ್ ವಶಕ್ಕೆ..!

ಜ.22 ರಂದು ಮಧ್ಯಾಹ್ನ 12:20 ರ ವೇಳೆಗೆ ಅಭಿಜಿನ್ ಮಹೂರ್ತದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ, ಮಧ್ಯಾಹ್ನ 1 ಗಂಟೆಗೆ ಪೂರ್ಣಗೊಳ್ಳಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್, ರಾಜ್ಯಪಾಲ ಆನಂದಿ ಬೆನ್ ಪಟೇಲ್, ರಾಮ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಮತ್ತು ಎಲ್ಲಾ ಟ್ರಸ್ಟಿಗಳು ಗರ್ಭಗುಡಿಯಲ್ಲಿ ಉಪಸ್ಥಿತರಿರುವರು ಎಂದು ಚಂಪತ್ ರಾಯ್ ತಿಳಿಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌: ಹಠಾತ್ ಬ್ರೇಕ್ ಹಾಕಿದ ಬಸ್ ಚಾಲಕ; ಬಸ್ ಮುಂಭಾಗದಲ್ಲಿ ಕುಳಿತ ಮಹಿಳೆ ಕೆಳಗೆ ಬಿದ್ದು ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು


Share News

Leave a Reply

Your email address will not be published. Required fields are marked *