Breaking News

ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ಕಟ್ಟಿ ಕೆರೆಗೆ ಎಸೆದ ಪತಿ

Share News

ದಾವಣಗೆರೆ, ಜ.25: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಪತಿ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಕೆರೆಗೆ ಎಸೆದ ಘಟನೆ ದಾವಣಗೆರೆ (Davanagere) ತಾಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ. ಕಾವ್ಯ (21) ಕೊಲೆಯಾದ ಮಹಿಳೆ‌ಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಗಳಗೆರೆ ಗ್ರಾಮದ ನಿವಾಸಿ ಸಚಿನ್ (24) ಕೊಲೆ ಮಾಡಿದ ಪತಿಯಾಗಿದ್ದಾನೆ.

ಇದನ್ನೂ ಓದಿ: ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

ಐದು ವರ್ಷಗಳ ಹಿಂದೆ ಸಾಸಲುಹಳ್ಳ ಗ್ರಾಮದ ಕಾವ್ಯ ಎಂಬಾಕೆಯನ್ನು ಸಚಿನ್ ಮದುವೆಯಾಗಿದ್ದ. ದಾವಣಗೆರೆ ತಾಲೂಕಿನ ಕಡ್ಲೆಬಾಳು ಗ್ರಾಮದ ಚೈತ್ರ (21) ಎನ್ನುವ ಯುವತಿ ಜೊತೆ ಸಂಬಂಧ ಇಟ್ಟುಕೊಂಡು ಕಾವ್ಯಾಳನ್ನು ಮದುವೆಯಾಗಿದ್ದನು.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತ; ತಲೆಗೆ ಪೆಟ್ಟು

ಈ ಅಕ್ರಮ ಸಂಬಂಧಕ್ಕೆ ಕಾವ್ಯಾ ಅಡ್ಡಿಯಾಗುತ್ತಿದ್ದಾಳೆ ಎಂದು ಸಚಿನ್ ಮತ್ತು ಚೈತ್ರಾ ಸೇರಿಕೊಂಡು ಕಾವ್ಯಾಳನ್ನು ಕೊಲೆ ಮಾಡಿದ್ದಾರೆ. ಬಳಿಕ ಗೋಣಿ ಚೀಲದಲ್ಲಿ ಕಾವ್ಯಾಳ ಮೃತದೇಹವನ್ನು ತುಂಬಿಸಿ ಕೊಡಗನೂರು ಕೆರೆಗೆ ಹಾಕಿದ್ದರು. 10 ದಿನಗಳ ಹಿಂದೆ ನಡೆದ ಈ ಕೊಲೆ ಪ್ರಕರಣ ಇದೀಗ ಬಯಲಿಗೆ ಬಂದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ.


Share News

Leave a Reply

Your email address will not be published. Required fields are marked *