Breaking News

ಬೆಳ್ಳಂಬೆಳಿಗ್ಗೆ ಹೊತ್ತಿ ಉರಿದ ಜನತಾ ಬಸ್!

Share News

ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ (Janatha Travels) ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ (Vijayapura) ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಇದನ್ನೂ ಓದಿ: ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ!

ಬೆಂಗಳೂರಿಂದ ಪ್ರಯಾಣಿಕರನ್ನ (Passenger) ಹೊತ್ತು ವಿಜಯಪುರಕ್ಕೆ ಬರುತ್ತಿದ್ದಾಗ ಬಸ್ಸಿಗೆ ಬೆಂಕಿ (Fire) ಹತ್ತಿಕೊಂಡಿದೆ. ಚಕ್ರ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸ್ಫೋಟಗೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ಸಿನಿಂದ ಕೆಳಗಡೆ ಇಳಿದ ಪರಿಣಾಮ ಯಾವುದೇ ಸಾವು ನೋವು ಸಂಭವಿಸಿಲ್ಲ. ಪ್ರಯಾಣಿಕರ ಬೆಲೆಬಾಳುವ ವಸ್ತುಗಳು, ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ಗಾಬರಿಗೊಂಡ ಪ್ರಯಾಣಿಕರು ಬೇರೆ ವಾಹನಗಳ ಸಹಾಯದಿಂದ ಊರು ಸೇರಿದ್ದಾರೆ.

ಇದನ್ನೂ ಓದಿ: ಉಳ್ಳಾಲ : ಶಾಲೆ ಸಮೀಪ ಮದ್ದು ಮಧ್ಯ ಸೇವನೆ ಪ್ರಶ್ನಿಸಿದಕ್ಕೆ ಚೂರಿಯಿಂದ ಇರಿದು ಯುವಕನ ಹತ್ಯೆ.!

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಮತ್ತು ಅಗ್ನಿ ಶಾಮಕ‌ ದಳ ದೌಡಾಯಿಸಿದ್ದು ಬೆಂಕಿ ನಂದಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WATCH VIDEO ON YOUTUBE: ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *