Breaking News

ನಾನು ಧರಿಸಿದ್ದ ಹುಲಿ ಉಗುರು ಅಸಲಿ ಅಲ್ಲ; ನಿಖಿಲ್ ಕುಮಾರಸ್ವಾಮಿ

Share News

ಬೆಂಗಳೂರು; ಜೆಡಿಎಸ್ ಯುವ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಮದುವೆಗೆ ಹುಲಿ ಉಗುರು ಪೆಂಡೆಂಟ್ ಧರಿಸಿದ್ದರು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು ಇದೀಗ ನಿಖಿಲ್‌ ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ʻʻನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇʼʼಎಂದು ನಿಖಿಲ್‌ ಅವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ನಟ ದರ್ಶನ್​ ಮತ್ತು ವಿನಯ್​ ಗುರೂಜಿ ವಿರುದ್ಧ ದೂರು ದಾಖಲು ;ಸೆಲೆಬ್ರಿಟಿಗಳಿಗೆ ಹೆಚ್ಚಾದ ಹುಲಿ ಹಗುರು ಪ್ರಕರಣ!

ʻʻತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತ ಅರಿವಿದೆʼʼ ಎಂದು ಟ್ವೀಟ್‌ ಮಾಡಿದ್ದಾರೆ.

ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿನಯ್ ಗುರೂಜಿ, ನಟ ಜಗ್ಗೇಶ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಅಂತಹದ್ದೇ ಪೆಂಡೆಂಟ್ ಧರಿಸಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ ವಿರುದ್ಧ ಬೃಹತ್ ಗೆಲುವು, ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಏರಿದ ದಕ್ಷಿಣ ಆಫ್ರಿಕಾ!

ಇದೀಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಈ ಬಗ್ಗೆ ಮಾತನಾಡಿ ʻʻಈಗಾಗಲೇ ಹುಲಿ ಚರ್ಮ ಉಗುರಿನ ಬಗ್ಗೆ ಗಣ್ಯ ವ್ಯಕ್ತಿಗಳ ಮೇಲೆ ದೂರು ಬಂದಿದೆ. ಉನ್ನತ ಮಟ್ಟದ ಸಮಿತಿ ನಡೆಸಿ ಕಾರ್ಯಚರಣೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ನೊಟೀಸ್‌ ಕೊಟ್ಟು ಪರೀಶಿಲನೆ ಮಾಡುತ್ತೇವೆ. ನಿಖಿಲ್‌ ಕುಮಾರ್‌ ಅವರನ್ನೂ ಪರಿಶೀಲನೆ ಮಾಡುತ್ತೇವೆ. ನೇರವಾಗಿ ಬರುವ ಮಾಹಿತಿಗಳಿಂದ ಕ್ರಮ ತೆಗೆದುಕೊಳ್ಳುತ್ತೇವೆʼʼಎಂದರು.

WATCH VIDEO ON YOUTUBE: ಮಧ್ಯದ ಬಹುದೊಡ್ಡ ಎಕ್ಸಿಬಿಷನ್ ಸರ್ವರ ಗಮನ ಸೆಳೆದಿದೆ!


Share News

Leave a Reply

Your email address will not be published. Required fields are marked *