Breaking News

ಜ್ವರದಿಂದ ಇಬ್ಬರು ಅಸಹಜ ಸಾವು; ನಿಫಾ ವೈರಸ್​​​ ಬಗ್ಗೆ ಎಚ್ಚರಿಕೆ ನೀಡಿದ ಕೇರಳ ಆರೋಗ್ಯ ಇಲಾಖೆ !

Share News

ಕೋಝಿಕ್ಕೋಡ್​​: ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಜ್ವರಕ್ಕೆ ಸಂಬಂಧಿಸಿದ ಎರಡು ಅಸ್ವಾಭಾವಿಕ ಸಾವುಗಳು ದಾಖಲಾದ ನಂತರ ಕೇರಳದ ಆರೋಗ್ಯ ಇಲಾಖೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ. ಇಬ್ಬರದ್ದು ಅಸಹಜ ಸಾವಾಗಿದ್ದು, ನಿಫಾ ವೈರಸ್​ನಿಂದ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಮೃತರ ಪೈಕಿ ಒಬ್ಬರ ಸಂಬಂಧಿಕರು ಐಸಿಯುನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ನಿಟ್ಟಿನಲ್ಲಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್​ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಕರಾವಳಿ ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಈ ವಾರ ಮಳೆ ಸಾಧ್ಯತೆ ; ಹವಾಮಾನ ಇಲಾಖೆ ಮುನ್ಸೂಚನೆ!

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ನಿಫಾ ವೈರಸ್​​ ಸೋಂಕು ಪ್ರಾಣಿಗಳಿಂದ ಜನರಿಗೆ ಹರಡುವ ಕಾಯಿಲೆಯಾಗಿದೆ ಮತ್ತು ಕಲುಷಿತ ಆಹಾರದ ಮೂಲಕ ಅಥವಾ ನೇರವಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಸೋಂಕಿತ ಜನರಲ್ಲಿ ಇದು ಲಕ್ಷಣ ರಹಿತ (ಸಬ್​​ಕ್ಲಿನಿಕಲ್​) ಸೋಂಕಿನಿಂದ ತೀವ್ರವಾದ ಉಸಿರಾಟದ ಕಾಯಿಲೆ ಮತ್ತು ಮಾರಣಾಂತಿಕ ಕಾಯಿಲೆಗಳನ್ನು ಉಂಟು ಮಾಡುತ್ತದೆ.

ಬಂಟ್ವಾಳ ಬೈಪಾಸ್ ನಲ್ಲಿ ನಿರ್ಮಾಣಗೊಂಡ ರಿಕ್ಷಾ ತಂಗುದಾಣ ನಾಳೆ ಉದ್ಘಾಟನೆ!

ಈ ಹಿಂದೆ 2018ರಲ್ಲಿ ಕೋಯಿಕ್ಕೋಡ್​ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ನಿಫಾ ಏಕಾಏಕಿ ಹಬ್ಬಿತ್ತು ನಂತರ 2021ರಲ್ಲಿ ಕೂಡ ಪ್ರಕರಣಗಳು ವರದಿಯಾಗಿತ್ತು. ನಿಫಾ ವೈರಸ್ ಕುರಿತು ಮಾಹಿತಿ ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ. ನಿಫಾ ವೈರಸ್​​, ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. (ಬಾವಲಿಗಳು ಕಚ್ಚಿದ ಹಣ್ಣನ್ನು ತಿನ್ನುವುದರಿಂದ ಹರಡುತ್ತದೆ) ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ ಬಾವಲಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ.

ತಾಸೆಯ ಪೆಟ್ಟಿಗೆ ಭರ್ಜರಿ ಹುಲಿ ಕುಣಿತ ಮಾಡಿದ ಶಿಕ್ಷಕರು ಹಾಗೂ ಮಕ್ಕಳು!


Share News

Leave a Reply

Your email address will not be published. Required fields are marked *