Breaking News

ಉಡುಪಿ : ಬೋಟ್ ನಿಂದ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದ ಮೀನುಗಾರ, 43 ಗಂಟೆ ಬಳಿಕ ಈಜುತ್ತಾ ಜೀವ ರಕ್ಷಣೆ

Share News

ಉಡುಪಿ ನ.10: ಬೋಟ್​ನಿಂದ (Boat) ಆಯತಪ್ಪಿ ಅರಬ್ಬಿ ಸಮುದ್ರಕ್ಕೆ (Arabian Sea) ಬಿದಿದ್ದ ಮೀನುಗಾರನನ್ನು ಬೈಂದೂರು (Baindur) ತಾಲೂಕಿನ ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರು 43 ಗಂಟೆಗಳ ಬಳಿಕ ರಕ್ಷಣೆ ಮಾಡಿದ್ದಾರೆ. ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ಅರಬ್ಬಿ ಸಮುದ್ರಕ್ಕೆ ಇಳಿದಿದ್ದರು. ಈ ತಂಡದಲ್ಲಿ ಇದ್ದ ಮುರುಘನ್​ (25) ಎಂಬ ಮೀನುಗಾರ (Fisherman) ಶನಿವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್​ನ ಅಂಚಿಗೆ ಹೋಗುತ್ತಾನೆ. ಈ ವೇಳೆ ಜೋರಾದ ಗಾಳಿಗೆ ಮುರುಘನ್​ ಆಯತಪ್ಪಿ ಸಮುದ್ರದಲ್ಲಿ ಬೀಳುತ್ತಾನೆ.

ಮುರುಘನ್​ ಸಮುದ್ರದಲ್ಲಿ ಬಿದ್ದಿರುವುದು ಉಳಿದ ಮೀನುಗಾರರಿಗೆ ತಿಳಿದಿರುವುದಿಲ್ಲ. ಎಷ್ಟು ಹೊತ್ತಾದರೂ ಮುರುಘನ್ ​ಒಳಗಡೆ ಬಾರದಿದ್ದರಿಂದ ಅನುಮಾನಗೊಂಡ ಉಳಿದ ಮೀನುಗಾರರು ಸಮುದ್ರದಲ್ಲಿ ಮುರುಘನನ್ನು ಹುಡುಕಲು ಆರಂಭಿಸುತ್ತಾರೆ. ಆದರೆ ಎರಡು ದಿನ ಕಳೆದರೂ ಮುರುಘನ್​ಪತ್ತೆಯಾಗಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಘನ್​ ಮೃತಪಟ್ಟಿದ್ದಾನೆ ಎಂದು ಮಾಲಿಕನಿಗೆ ತಿಳಿಸುತ್ತಾರೆ.

ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ

ಆದರೆ ಮುರುಘನ್​ ಜೀವ ಉಳಿಸಿಕೊಳ್ಳಲು ಸಮುದ್ರದಲ್ಲೇ ಈಜುತ್ತಿರುತ್ತಾನೆ. ಇಂದು (ನ.10) ರಂದು ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯುತ್ತಾರೆ. ಗಂಗೊಳ್ಳಿಯಿಂದ ಸುಮಾರು 14 ನಾಟಿಕಲ್ ಮೈಲ್ ದೂರ ಹೋದಾಗ ಮುರುಘನ್​​ನನ್ನು ಕಾಣುತ್ತಾನೆ. ಗಂಗೊಳ್ಳಿ ಮೀನುಗಾರರು ಮೀನು ಅಂದುಕೊಂಡು ಮುರುಘನ್​ ಬಳಿ ಹೋದಾಗ, ಆಶ್ಚರ್ಯವಾಗುತ್ತದೆ. ಮೀನಲ್ಲ ಮನುಷ್ಯನೆಂದು ತಿಳಿಯುತ್ತದೆ.

ಕೊನೆಗೆ ಗಂಗೊಳ್ಳಿ ಮೀನುಗಾರರು ಮುರುಘನ್​ನನ್ನು ರಕ್ಷಣೆ ಮಾಡುತ್ತಾರೆ. ಜೀವ ಉಳಿಸಿಕೊಳ್ಳಲು ಸತತ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಮುರುಘನ್​ ನಿತ್ರಾಣಗೊಂಡಿದ್ದನು. ಸರಿಸುಮಾರು ಎರಡು ದಿನಗಳ ಕಾಲ ನಿರಂತರವಾಗಿ ಈಜಿ ಬಸವಳಿದಿದ್ದ ಮೀನುಗಾರ ಮುರುಘನ್​​ನನ್ನು ರಕ್ಷಣೆ ಮಾಡಲಾಗಿದೆ. ಮುರುಘನ್​​ಗೆ ಗಂಗೊಳ್ಳಿ ಮೀನುಗಾರರು ಪ್ರಥಮ ಚಿಕಿತ್ಸೆ ನೀಡುತ್ತಾರೆ. ಸಮುದ್ರಕ್ಕೆ ಬಿದ್ದು ಮುರುಘನ್ ಮೃತಪಟ್ಟಿದ್ದಾನೆ ಎಂದು ಶವ ಹುಡುಕುತ್ತಿದ್ದ ತಮಿಳುನಾಡಿನ ಮೀನುಗಾರರ ತಂಡಕ್ಕೆ ಈತ ಬದುಕಿದ್ದನ್ನು ಕಂಡು ಆಶ್ಚರ್ಯವಾಗುತ್ತದೆ. ಬಳಿಕ ಗಂಗೊಳ್ಳಿ ಮೀನುಗಾರರು ಮುರುಘನ್​ನನ್ನು ತಮಿಳುನಾಡು ಮೀನುಗಾರರಿಗೆ ಒಪ್ಪಿಸುತ್ತಾರೆ.

ಇದನ್ನೂ ಓದಿ: Vedio : ಎಕ್ಸ್‌ಪ್ರೆಸ್‌ವೇನಲ್ಲಿ ಸ್ಲೀಪರ್ ಬಸ್‌ಗೆ ಬೆಂಕಿ ತಗುಲಿ 2 ಸಚಿವ ದಹನ, 12 ಜನರಿಗೆ ಗಾಯ

 


Share News

Leave a Reply

Your email address will not be published. Required fields are marked *