Breaking News

ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ

Share News

ಉಡುಪಿ ಜನವರಿ 04: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಉಡುಪಿ : ಕೆಂಡಸೇವೆ ವೇಳೆ ಬೆಂಕಿ ಮೇಲೆ ಆಯತಪ್ಪಿ ಬಿದ್ದ ಅಯ್ಯಪ್ಪ ಮಾಲಾಧಾರಿ; ಇಲ್ಲಿದೆ ವಿಡಿಯೋ…!

ಈ ಘಟನೆ ಜನವರಿ 4ರಂದು ಅಜ್ಜರಕಾಡು ಸಮೀಪ ನಡೆದಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದು ಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದರೆನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ರಿಕ್ಷಾ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಹೊಸ ಮುಖಗಳಿಗೆ ಮಣೆಹಾಕಲು ರಾಹುಲ್ ಗಾಂಧಿ ತೀರ್ಮಾನ. ತುಮಕೂರಿಗೆ ನಿಕೇತ್ ರಾಜ್, ಮಂಡ್ಯಕ್ಕೆ ರಮ್ಯ?


Share News

Leave a Reply

Your email address will not be published. Required fields are marked *