Breaking News

ಉಡುಪಿ : ಕಾರು ಡಿಕ್ಕಿಯಾಗಿ ಪ್ರಾಣ ಕಳೆದುಕೊಂಡ ಶಾಲಾ ಬಾಲಕ ಬಿಪಿನ್!

Share News

ಕಡಬ, ಡಿಸೆಂಬರ್ 16: ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಇಲ್ಲಿನ ಕಳಾರ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.

ಇದನ್ನೂ ಓದಿ: ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್!!

ಮೃತ ಬಾಲಕನನ್ನು ಕಳಾರ ನಿವಾಸಿ ಬಿಪಿನ್ (13) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ತಂಗಿ ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಲೆಯ ಕ್ರೀಡೋತ್ಸೋವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಸುಳ್ಯ: ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ

ಕಾರು ಚಾಲಕ ಅಜಾಗರೂಕತೆ ಶಾಲಾ ಬಾಲಕನೊಬ್ಬ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

WATCH VIDEO ON YOUTUBE: ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *