Breaking News

ಉಡುಪಿ- ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ವಿನಯ್ ಕುಮಾರ್ ಸೊರಕೆ, ರಾಜಶೇಖರ ಕೋಟ್ಯಾನ್ ಹೆಸರು ಹೈಕಮಾಂಡ್ ಪರಿಶೀಲನೆಯಲ್ಲಿ?

Share News

ಉಡುಪಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರಾಗಬಹುದು ಎಂಬ ಕುತೂಹಲ ಗರಿಗೆದರಿದೆ. ಈ ನಡುವೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಶೇಖರ ಕೋಟ್ಯಾನ್ ಹೆಸರು ಪ್ರಸ್ತಾವನೆಯಲ್ಲಿದೆ ಎಂದು ತಿಳಿದು ಬಂದಿದೆ.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ರಾಜಶೇಖರ ಕೋಟ್ಯಾನ್ ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳಾಗುವ ಬಗ್ಗೆ ಹೈಕಮಾಂಡ್ ಗಂಭೀರ ಪರಿಶೀಲನೆಯಲ್ಲಿ ತೊಡಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಕಳೆದ ಬಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ವಿಜಯರಾಗಿದ್ದರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಈ ಕಾರಣದಿಂದ ಪ್ರಬಲ ಪೈಪೋಟಿ ಈ ಲೋಕಸಭಾ ಕ್ಷೇತ್ರದಲ್ಲಿ ನಡೆಯಬಹುದು ಎಂದು ಅಂದಾಜಿಸಲಾಗುತ್ತಿದೆ. ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಹೈಕಮಾಂಡ್ ನ ಗಮನ ಸೆಳೆದಿದೆ.

ಮಂಗಳೂರು ಲೋಕಸಭಾ ಕ್ಷೇತ್ರ: ವೀಕ್ಷಕರಾಗಿ ಮಧು ಬಂಗಾರಪ್ಪ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸುಳ್ಯ ಮೂಲದ ಯುವ ಒಕ್ಕಲಿಗ ಅಭ್ಯರ್ಥಿ?

ವಿನಯ್ ಕುಮಾರ್ ಸೊರಕೆ ಈ ಮೊದಲು ಹಳೆಯ ಉಡುಪಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಅಲ್ಲದೆ ಕಾಪು ವಿಧಾನ ಸಭಾ ಕ್ಷೇತ್ರವನ್ನು ಒಂದು ಬಾರಿ ಪ್ರತಿನಿಧಿಸಿದ್ದರು. ಈ ಬಾರಿ ಅವರು ಕಳೆದುಕೊಂಡಿದ್ದರು.

ರಾಜಶೇಖರ್ ಕೋಟ್ಯಾನ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಉಡುಪಿ ಮಾತ್ರವಲ್ಲದೆ ಚಿಕ್ಕಮಂಗಳೂರಿನಲ್ಲಿಯೂ ತನ್ನ ಸಂಪರ್ಕವನ್ನು ರಾಜಶೇಖರ ಕೋಟ್ಯಾನ್ ಹೊಂದಿದ್ದಾರೆ. ಈ ಇಬ್ಬರು ನಾಯಕರುಗಳ ಹೆಸರು ಗಂಭೀರವಾಗಿ ಪರಿಶೀಲನೆಯಲ್ಲಿದೆ ಎಂದು ತಿಳಿದುಬಂದಿದೆ.


Share News

Leave a Reply

Your email address will not be published. Required fields are marked *