Breaking News

ಉಡುಪಿ ಮಣಿಪಾಲ ಫಾರ್ಮಸ್ಯುಟಿಕಲ್ ಸೈನ್ಸ್ ಕಾಲೇಜ್ ಪ್ರಾಧ್ಯಾಪಕ ಡಾ.ಅಲೆಕ್ಸ್ ಜೋಸೆಫ್ ಹೃದಯಾಘಾತದಿಂದ ನಿಧನ!

Share News

ಉಡುಪಿ : ಉಡುಪಿ ಮಣಿಪಾಲ ಫಾರ್ಮಸ್ಯುಟಿಕಲ್ ಸೈನ್ಸ್ ಕಾಲೇಜ್ ಪ್ರಾಧ್ಯಾಪಕ ಡಾ.ಅಲೆಕ್ಸ್ ಜೋಸೆಫ್(47) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ಐಪಿಎಲ್​ ಇತಿಹಾಸದಲ್ಲಿ ಭರ್ಜರಿ ಮೊತ್ತಕ್ಕೆ ಸೇಲ್​ ಆದ ಕಮಿನ್ಸ್..!

ಮಂಗಳವಾರ ಬೆಳಗ್ಗೆ 11.50ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಜೋಸೆಫ್ ಅವರು ಮಣಿಪಾಲ ಕಾಲೇಜ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸ್ ನ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಅದೇ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿರುವ ಅವರ ಪತ್ನಿ ಎಂಜೆಲ್ ಟ್ರೀಸಾ ಅಲೆಕ್ಸ್ ಜೊತೆ ಬೆಳಗ್ಗೆ 8 ಗಂಟೆಗೆ ಕಾಲೇಜಿಗೆ ತೆರಳಿದ್ದರು.

ಇದನ್ನೂ ಓದಿ: ಬೆಳ್ತಂಗಡಿ : ಶಿಶಿಲದಲ್ಲಿ ಪತ್ನಿಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಹಲ್ಲೆ ಮಾಡಿ ಎಸ್ಕೇಪ್ ಆದ ಪತಿ..!

ಕಾಲೇಜಿನಲ್ಲಿರುವ ವೇಳೆ ಡಾ.ಅಲೆಕ್ಸ್ ಜೋಸೆಫ್ ಅವರಿಗೆ ವಿಪರೀತ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅಲೆಕ್ಸ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WATCH VIDEO ON YOUTUBE: ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *