Breaking News

ಉಡುಪಿ ನಾಲ್ವರ ಕೊಲೆ ಆರೋಪಿ ಪ್ರವೀಣ್ ಚೌಗಲೆಯಿಂದ ಜಾಮೀನು ಕೋರಿ ಅರ್ಜಿ ಸಲ್ಲಿಕೆ..!

Share News

ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಹತ್ಯಾಕಾಂಡ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ (39) ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ: ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್!!

ಬೆಂಗಳೂರು ಪರಪ್ಪನ ಆಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗಲೆ ಪರ ಕೆಎಸ್‌ಎನ್ ರಾಜೇಶ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶರಾದ ದಿನೇಶ್ ಹೆಗ್ಡೆಯವರು ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದಾರೆ. ಅದರಂತೆ ಡಿಸೆಂಬರ್ 20ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿ ಸರಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ಅವರಿಗೆ ನೋಟೀಸ್ ನೀಡಲಾಗಿದೆ.

ಇದನ್ನೂ ಓದಿ: ಸುಳ್ಯ: ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ

ನವೆಂಬರ್ 12ರಂದು ನೇಜಾರು ತೃಪ್ತಿ ಲೇಔಟ್‌ನಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಪ್ರವೀಣ್ ಚೌಗಲೆಯನ್ನು ಪೊಲೀಸರು ನವೆಂಬರ್ 14ರಂದು ಬಂಧಿಸಿದ್ದರು.

WATCH VIDEO ON YOUTUBE: ಸಿದ್ದಕಟ್ಟೆಯ ಪುಚ್ಛಮಗುರೂರಿನಲ್ಲಿ ಸೆರೆಯಾಗಿದೆ ಚಿರತೆ!


Share News

Leave a Reply

Your email address will not be published. Required fields are marked *