Breaking News

Vedio : ಎಕ್ಸ್‌ಪ್ರೆಸ್‌ವೇನಲ್ಲಿ ಸ್ಲೀಪರ್ ಬಸ್‌ಗೆ ಬೆಂಕಿ ತಗುಲಿ 2 ಸಚಿವ ದಹನ, 12 ಜನರಿಗೆ ಗಾಯ

Share News

ಗುರುಗ್ರಾಮ ನ 09 : ಸ್ಲೀಪರ್​ ಬಸ್ ಗೆ ​ ಏಕಾಏಕಿ ಹೊತ್ತಿ ಉರಿದ ಪರಿಣಾಮ, ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವದಹನವಾದ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ನಡೆದಿದೆ. ದುರಂತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸದಾನಂದ ಗೌಡ

ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್‌ಗೆ ಬುಧವಾರ ರಾತ್ರಿ ಗುರುಗ್ರಾಮ್ ತಲುಪುತ್ತಿದ್ದಂತೆ ಬಸ್​​ನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರು ಬಸ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ನಿದ್ರಾವಸ್ಥೆಯಲ್ಲಿದ್ದ ಇಬ್ಬರು ಬೆಂಕಿ ಕೆನ್ನಾಲಿಗೆಗೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೋಲಿಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ರಥಕ್ಕೆ ವಿದ್ಯುತ್ ಸ್ಪರ್ಶ; ಅಪಾಯದಿಂದ ಪಾರು!

ಸ್ಲೀಪರ್‌ ಬಸ್‌ನಿಂದ ಎರಡು ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೊಂದೆಡೆ, ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ದೆಹಲಿ ಜೈಪುರ ಹೆದ್ದಾರಿಯಲ್ಲಿ ಸುದೀರ್ಘ ಟ್ರಾಫಿಕ್ ಜಾಮ್ ಆಗಿತ್ತು. ಜಾಮ್ ತೆರವುಗೊಳಿಸಲು ಪೊಲೀಸ್ ಸಿಬ್ಬಂದಿ ತುಂಬಾ ಕಷ್ಟಪಡುವಂತಾಯಿತು.

https://twitter.com/i/status/1722315952279490781


Share News

Leave a Reply

Your email address will not be published. Required fields are marked *