Breaking News

ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು; ಮೃತದೇಹಕ್ಕಾಗಿ ಶೋಧ..!

Share News

ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ (Hemavati River) ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಇಲ್ಲಿನ (Hassan) ಗೊರೂರಿನಲ್ಲಿ (Gorur) ನಡೆದಿದೆ.

ಇದನ್ನೂ ಓದಿ: ಕುಂದಾಪುರ : ಬಸ್ ನಡಿ ಸಿಲುಕಿದ ಸೈಕಲ್ ಸವಾರ ; ಅದೃಷ್ಟವಶಾತ್ ಪಾರು – ವಿಡಿಯೋ ವೈರಲ್

ಮೃತ ಯುವತಿಯನ್ನು ಗೊರೂರು ಅರಳಿಕಟ್ಟೆ ಗ್ರಾಮದ ಗಿರೀಶ್ ಎಂಬವರ ಪುತ್ರಿ ನಿತ್ಯ (19) ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಪೂಜೆಗಾಗಿ ಸಂಬಂಧಿಕರೊಂದಿಗೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಯುವತಿ ತೆರಳಿದ್ದಳು. ಈ ವೇಳೆ ಪೂಜೆ ಸಲ್ಲಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ: ಹಿಜಾಬ್ ನಿಷೇಧ ವಾಪಾಸ್ ಸೂಚನೆ ;ಸಿಎಂ ಸಿದ್ದರಾಮಯ್ಯ

ಯುವತಿಯ ಮೃತದೇಹಕ್ಕಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

WATCH VIDEO ON YOUTUBE: ನೀರಿಗೆ ಬಿದ್ದಿದ್ದಾನೆಂದು ಭಾವಿಸಿ ವ್ಯಕ್ತಿ ಒಬ್ಬರನ್ನು ರಕ್ಷಿಸಲು ಮುಂದಾದ ಆನೆ!


Share News

Leave a Reply

Your email address will not be published. Required fields are marked *